
ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋಧಗೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ 40 ವರ್ಷದ ಲಕ್ಷ್ಮೀಪತಿ ಮೃತ ವ್ಯಕ್ತಿ.
ಅಂದಹಾಗೆ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ನೃತ್ಯ ಮಾಡುತ್ತಿದ್ದ ಲಕ್ಷ್ಮಿಪತಿ ಏಕಾಏಕಿ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೃಷಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮಿಪತಿ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.