Categories: ಕೋಲಾರ

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ ಮೂಲಕ ಯುವಕರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಆಯಾ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರಿಗೆ ಗಣಪತಿ ಮೂರ್ತಿ ನೀಡಿ ಮನವಿ ಸಲ್ಲಿಸಿ ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಣಾಮ ಬಹುತೇಕ ಕೆರೆ, ಕುಂಟೆಗಳು ಬತ್ತಿಹೋಗಿವೆ. ಕೆ.ಸಿ. ವ್ಯಾಲಿ ನೀರು ಹರಿಯುವ ಕೆಲವು ಕೆರೆಗಳು ಹಾಗೂ ಚೆಕ್‌ಡ್ಯಾಂಗಳಲ್ಲಿ ಮಾತ್ರ ನೀರು ಲಭ್ಯವಿದ್ದು, ರೈತರು ಕೃಷಿ ಹೊಂಡಗಳನ್ನು ಬೆಳೆಗಳಿಗೆ ನೀರು ಹರಿಸಲು ಬಳಸಿಕೊಳ್ಳುತ್ತಿದ್ದಾರೆ. ಇಂತಹ ಕೃಷಿ ಹೊಂಡಗಳಿಗೆ ಬೇಲಿ ಹಾಗೂ ಸುರಕ್ಷತಾ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ನೀರಿಗೆ ಇಳಿದು ಪ್ರಾಣ ಕಳೆದುಕೊಂಡಿರುವ ಘಟನೆಗಳು ಈಗಾಗಲೇ ನಡೆದಿವೆ ಎಂದು ಹೇಳಿದರು.

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕೃಷಿ ಹೊಂಡ, ಕೆರೆ, ಕುಂಟೆ ಹಾಗೂ ಚೆಕ್‌ಡ್ಯಾಂಗಳಿಗೆ ತೆರಳುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು, ಕೃಷಿ ಹೊಂಡಗಳಲ್ಲಿ ಗಣೇಶ ವಿಸರ್ಜನೆ ಮಾಡದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಲು ಮಾಲೀಕರಿಗೆ ಸೂಚಿಸಬೇಕು. ಮಕ್ಕಳನ್ನು ವಿಸರ್ಜನೆಗೆ ಕರೆದೊಯ್ಯದಂತೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

ಬರಗಾಲದ ನಡುವೆಯೂ ಗ್ರಾಮೀಣ ಪ್ರದೇಶಗಳಲ್ಲಿ ಗೌರಿ-ಗಣೇಶ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಜಾರಿಗೊಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಸಲಹೆ ನೀಡಿದರು.

ಯುವ ರೈತ ಮುಖಂಡ ಯಾರಂಘಟ್ಟ ಗಿರೀಶ ಮಾತನಾಡಿ, ಹಬ್ಬದ ಸಂಭ್ರಮದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮೆರವಣಿಗೆ ನಡೆಸಬೇಕು. ಅಹಿತಕರ ಘಟನೆಗಳನ್ನು ತಡೆಯಲು ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡದಂತೆ ಬಾರ್ ಮಾಲೀಕರಿಗೆ ತಿಳುವಳಿಕೆ ನೀಡಬೇಕು. ಪ್ರತಿ ಗ್ರಾಮದಲ್ಲೂ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬಯಲುಸೀಮೆಯ ಕೋಲಾರ ಜಿಲ್ಲೆಗೆ ವರದಾನವಾಗಿದ್ದ ಕೃಷಿ ಹೊಂಡಗಳು ಸೂಕ್ತ ಸುರಕ್ಷತಾ ಕ್ರಮಗಳಿಲ್ಲದೆ ಅಪಾಯಕಾರಿಯಾಗಿವೆ. ಕೃಷಿ ಹೊಂಡಗಳಿಗೆ ಬೇಲಿ ಅಳವಡಿಸುವಲ್ಲಿ ಕೃಷಿ ಇಲಾಖೆ ನಿರ್ಲಕ್ಷ್ಯ ವಹಿಸಿರುವ ಪರಿಣಾಮ ಈಗಾಗಲೇ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಪರಿಸರಕ್ಕೆ ಹಾನಿಕಾರಕವಾಗಿರುವ ರಾಸಾಯನಿಕ ಮಿಶ್ರಿತ ಪಿಒಪಿ ಗಣೇಶ ಮೂರ್ತಿಗಳ ಮಾರಾಟವನ್ನು ಸ್ಥಗಿತಗೊಳಿಸಿ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿ, ಗಣೇಶ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿಯಮಗಳನ್ನು ಜಾರಿಗೊಳಿಸುವಂತೆ ಸೂಚಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕೃಷಿ ಹೊಂಡ, ಕೆರೆ, ಕುಂಟೆ ಹಾಗೂ ಚೆಕ್‌ಡ್ಯಾಂಗಳಲ್ಲಿ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ವಕ್ಕಲೇರಿ ಹನುಮಯ್ಯ, ಚಂದ್ರಪ್ಪ, ಕಮದಟ್ಟಿ ಚಲಪತಿ, ಮಂಜುನಾಥ್, ಪುತ್ತೇರಿ ರಾಜು, ನಾಗರಾಜ್, ತರ್ನಹಳ್ಳಿ ಆಂಜಿನಪ್ಪ, ಸುಪ್ರೀಂ ಚಲ ಮುನಿರಾಜು, ವಾನರಾಶಿ ವೀರಭದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago