ಗಣೇಶ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಕಿರಿಕ್: ಹಳೇ ದ್ವೇಷಕ್ಕೆ ಸೆಕ್ಯೂರಿಟಿ ಗಾರ್ಡ್ ಬರ್ಬರ ಕೊಲೆ

ಗಣೇಶ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಕಿರಿಕ್ ಆಗಿತ್ತು. ಕಿರಿಕ್ ದ್ವೇಷ ಮನಸ್ಸಿನಲ್ಲಿಟ್ಟುಕೊಂಡು ಸೆಕ್ಯೂರಿಟಿ ಗಾರ್ಡ್ ಕೆಲಸ‌ ಮಾಡುತ್ತಿದ್ದವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ.

ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ‌. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ.

ಗ್ರಾಮದಲ್ಲಿ ಹೆಸರು ಮಾಡಬೇಕು ಎಂದು ಆರೋಪಿ ಗೋವಿಂದ್ ಗ್ಯಾಂಗ್ ಕಟ್ಟಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಚಾರದಲ್ಲಿ ನಿನ್ನೆ ರಾತ್ರಿ ತನ್ನ ನಾಲ್ವರು ಸ್ನೇಹಿತರ ಜೊತೆ ಹೋಗಿ ಸೆಕ್ಯೂರಿಟಿ ಗಾರ್ಡ್ ಕೆಲಸ‌ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಕೊಲೆ‌ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ಸೇರಿದಂತೆ ನಾಲ್ವರು ಆರೋಪಿಗಳು‌ ರಾತ್ರಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎನ್ನಲಾಗಿದೆ.

ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

54 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

5 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago