ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ.
ನಗರದ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮತ್ತು ದುಃಖ ಮಡುಗಟ್ಟಿದೆ.
ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳ ಕುರಿತು ತನಿಖೆ ಮುಂದುವರಿದಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…