“ಗಬ್ಬರ್ ಸಿಂಗ್ ತೆರಿಗೆ”(GST) ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ- ‌ಸಿಎಂ ಸಿದ್ದರಾಮಯ್ಯ

ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದು ನರೇಂದ್ರ ಮೋದಿ (Narendra Modi) ಸರ್ಕಾರದ ಹೊಸ ಅವಿಷ್ಕಾರವೇನಲ್ಲ. ಅತ್ಯಂತ ಅವಸರದಲ್ಲಿ ಎನ್ ಡಿ ಎ ಸರ್ಕಾರ 2017ರಲ್ಲಿ ದೋಷಪೂರ್ಣ ಜಿ.ಎಸ್.ಟಿ ಯನ್ನು ಜಾರಿಗೊಳಿಸಿದಾಗಲೇ ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ Rahul Gandhi ಮತ್ತು ವಿರೋಧ ಪಕ್ಷಗಳ ನಾಯಕರು ಜಿ.ಎಸ್.ಟಿ ಗೆ ಮಾಡಲೇಬೇಕಾಗಿದ್ದ ಸುಧಾರಣೆಗಾಗಿ ಒತ್ತಾಯಿಸಿದ್ದರು ಎಂದು ಹೇಳಿದರು.

“ಗಬ್ಬರ್ ಸಿಂಗ್ ತೆರಿಗೆ” ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ. ತೆರಿಗೆ ಪಾವತಿ ವ್ಯವಸ್ಥೆಯ ಸಂಕೀರ್ಣತೆ ಮತ್ತು ವೆಚ್ಚದ ಹೊರೆ ಅವರ ಬದುಕನ್ನು ಸರಣಿ ಕಷ್ಟಗಳ ಸರಮಾಲೆಗೆ ಸಿಲುಕಿಸಲಿದೆ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೇಳುತ್ತಲೇ ಬಂದಿದ್ದೆವು. ಆದರೆ ನರೇಂದ್ರ ಮೋದಿಯವರು ನಮ್ಮ ಮಾತಿಗೆ ಕಿವಿಗೊಡದೆ ನಿರ್ಲಕ್ಷಿಸುತ್ತಲೇ ಬಂದಿದ್ದರು ಎಂದು ತಿಳಿಸಿದರು.

ವಾಸ್ತವದಲ್ಲಿ ಜಿ.ಎಸ್.ಟಿ ತೆರಿಗೆ ವ್ಯವಸ್ಥೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು ರಾಜ್ಯ ಸರ್ಕಾರಗಳು ಅಸಹಾಯಕತೆಯಿಂದ ನರಳಾಡುವುದರ ಹೊರತಾಗಿ ಬೇರೇನನ್ನೂ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ.
ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮೂರನೇ ಒಂದರಷ್ಟು ಮತದಾನದ ಹಕ್ಕು ಇದ್ದರೆ, ರಾಜ್ಯಗಳಿಗೆ ಮೂರನೇ ಎರಡರಷ್ಟಿದೆ. ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಸುಧಾರಣೆಯನ್ನು ಮಾಡಬೇಕಾದರೆ ನಾಲ್ಕನೇ ಮೂರರಷ್ಟು ಬಹುಮತ ಅಗತ್ಯವಾಗಿದೆ. ಈ ಸ್ಥಿತಿಯಲ್ಲಿ ದೇಶದ ಎಲ್ಲ ರಾಜ್ಯಗಳು ಒಂದುಗೂಡಿ ತೆರಿಗೆ ಸುಧಾರಣೆಗೆ ಪ್ರಯತ್ನಿಸಿದರೂ ಅದನ್ನು ಕೇಂದ್ರ ಸರ್ಕಾರ ತಡೆಯಬಹುದಾಗಿದೆ. ಕಳೆದ ಎಂಟು ವರ್ಷಗಳಿಂದ ನರೇಂದ್ರ ಮೋದಿ ಸರ್ಕಾರ ಇದನ್ನೇ ಮಾಡುತ್ತಾ ಬಂದಿದೆ ಎಂದರು.

ಈಗ ಜಿ.ಎಸ್.ಟಿ ಕೌನ್ಸಿಲ್ ಕೈಗೊಂಡಿರುವ ಜಿ.ಎಸ್.ಟಿ ಸುಧಾರಣೆಯ ಪ್ರಯತ್ನಕ್ಕೆ‌ ಕೇಂದ್ರ ಸರ್ಕಾರವು ಬೆಂಬಲ ಕೊಟ್ಟಿರುವುದಕ್ಕೆ ಜನತೆಯ ಮೇಲಿನ ಅವರ ಕಾಳಜಿಗಿಂತಲೂ, ರಾಜ್ಯ ಸರ್ಕಾರಗಳು ಸತತವಾಗಿ ಹೇರುತ್ತಾ ಬಂದಿರುವ ಒತ್ತಡ ಮುಖ್ಯ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಇದನ್ನು ಪ್ರಾರಂಭದಲ್ಲಿಯೇ ಮಾಡಿದ್ದರೆ ದೇಶದ ಜನತೆ ‘’ಗಬ್ಬರ್ ಸಿಂಗ್ ತೆರಿಗೆ” ವ್ಯವಸ್ಥೆಯಿಂದ ಪಡಬಾರದ ಕಷ್ಟಗಳನ್ನು ಪಡಬೇಕಾದ ಪರಿಸ್ಥಿತಿ ಇರುತ್ತಿರಲಿಲ್ಲ ಎಂದು ಹೇಳಿದರು.

ಈಗ ಜಿ.ಎಸ್.ಟಿ ಸುಧಾರಣೆಯ ಲಾಭ ಬಳಕೆದಾರ ಜನತೆಗೆ ತಲುಪುವಂತೆ ಮಾಡುವುದು ಕೇಂದ್ರ ಸರ್ಕಾರ ಮತ್ತು ಕೇಂದ್ರ ತೆರಿಗೆ ಮತ್ತು ಸುಂಕ ಮಂಡಳಿ (ಸಿಬಿಐಸಿ)ಯ ಜವಾಬ್ದಾರಿಯಾಗಿದೆ. ಈ ತೆರಿಗೆ ಸುಧಾರಣೆಯನ್ನು ವ್ಯಾಪಾರಿಗಳು ಮತ್ತು ಉದ್ಯಮಿಗಳು ತಮ್ಮ ಲಾಭಾಂಶವನ್ನು ಹೆಚ್ಚುಮಾಡಲು ದುರುಪಯೋಗ ಮಾಡದಂತೆ ತಡೆಯುವ ಹೊಣೆ ಕೂಡಾ ಕೇಂದ್ರ ಸರ್ಕಾರದ್ದಾಗಿದೆ ಎಂದರು.

ಈಗಿನ ಲೆಕ್ಕಾಚಾರದ ಪ್ರಕಾರ ಈಗಿನ ಜಿ.ಎಸ್.ಟಿ ಸುಧಾರಣೆಯಿಂದಾಗಿ ಕರ್ನಾಟಕ ಸರ್ಕಾರ ವಾರ್ಷಿಕ ₹15,000 ದಿಂದ ₹20,000 ಕೋಟಿಯಷ್ಟು ವರಮಾನವನ್ನು ಕಳೆದುಕೊಳ್ಳಲಿದೆ. ಹೀಗಿದ್ದರೂ ರಾಜ್ಯದ ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಈ ನಿರ್ಧಾರವನ್ನು ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗಲೂ ಸಂಗ್ರಹಿಸುತ್ತಿರುವ ಜಿ.ಎಸ್.ಟಿ ಪರಿಹಾರ ಸುಂಕದಲ್ಲಿ ನ್ಯಾಯಬದ್ಧ ಪಾಲನ್ನು ರಾಜ್ಯಕ್ಕೆ ನೀಡಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ತಿಳಿಸಿದರು.

ಜನತೆಯ ಖರೀದಿ ಸಾಮರ್ಥ್ಯದ ಹೆಚ್ಚಳ ಮತ್ತು ತೆರಿಗೆ ಪಾವತಿದಾರರ ಜಾಲದ ವಿಸ್ತರಣೆಯ ಮೂಲಕ ಆರ್ಥಿಕ ಅಭಿವೃದ್ದಿಯನ್ನು ಸಾಧಿಸಿ ಸರ್ವರಿಗೂ ಸಮೃದ್ದಿಯ ಪಾಲು ಸಿಗುವಂತೆ ಮಾಡುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

7 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago