ಗಾಂಜಾ ನಾಪತ್ತೆ ಪ್ರಕರಣದಲ್ಲಿ ತನ್ನನ್ನು ಅಕ್ರಮವಾಗಿ ಸಿಲುಕಿಸಲಾಗಿದೆ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಕಾನ್‌ಸ್ಟೆಬಲ್ ಸಾಗರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾಗರ್ ಮೃತಪಟ್ಟಿದ್ದಾರೆ ಎಂದು ಸಾಗರ್ ಕುಟುಂಬಸ್ಥರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಪೊಲೀಸ್ ಠಾಣೆಯಲ್ಲಿ ಗಾಂಜಾ ನಾಪತ್ತೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಸಾಗರ್, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಬರ್ಗಂಪಾಡು ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ರಿಮಾಂಡ್ ನಿಂದ ಮರಳಿದ ನಂತರ ಸಾಗರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನನ್ನು ಅಕ್ರಮವಾಗಿ ಗಾಂಜಾ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿದ್ದರು.