ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 154ನೇ ಜನ್ಮದಿನ ಪ್ರಯುಕ್ತ ದೆಹಲಿಯ ರಾಜ್‌ಘಾಟ್‌ನಲ್ಲಿರುವ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು.
ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡಾ ರಾಜ್‌ಘಾಟ್‌ಗೆ ತೆರಳಿ ಬಾಪೂಜಿ ಅವರಿಗೆ ಗೌರವ ಸಲ್ಲಿಸಿದರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಸೇರಿಂದತೆ ವಿವಿಧ ಕ್ಷೇತ್ರಗಳ ಗಣ್ಯರು ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ. ಎಲ್ಲಾ ಕಡೆ ಏಕತೆ ಮತ್ತು ಸಾಮರಸ್ಯವನ್ನು ಬೆಳೆಸಲು ಅನುವು ಮಾಡಿಕೊಡಲಿ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.