ಮಹಾತ್ಮಾ ಗಾಂಧೀಜಿ ಅವರ ಪುಣ್ಯಸ್ಮರಣೆ ಹಾಗೂ ಹುತಾತ್ಮರ ದಿನಾಚರಣೆ ಅಂಗವಾಗಿ ದೇವನಹಳ್ಳಿಯ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಎರಡು ನಿಮಿಷ ಮೌನ ಆಚರಿಸುವ ಮೂಲಕ “ಗಾಂಧೀಜಿ” ಅವರಿಗೆ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜೇಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಟರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಧಿತರಿದ್ದರು.