Categories: Home

ಗಾಂಧೀಜಿ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಅಂಗವಾಗಿ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. ಪ್ರತಿವರ್ಷ ಅಕ್ಟೋಬರ್‌ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂ​ಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ,  ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಈ ದೇಶ ಕಂಡ ಅಪ್ರತಿಮ ನಾಯಕ.  ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಡೆಸಿದ್ದ ಮಹಾತ್ಮ ಗಾಂಧೀಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ ಅವರು ಮಹಾತ್ಮ ಗಾಂಧೀಜಿ ಅವರ ಜೀವನಚರಿತ್ರೆ, ಹೋರಾಟ, ತತ್ವಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ .

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಸಿ.ರೂಪಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago