ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. ಪ್ರತಿವರ್ಷ ಅಕ್ಟೋಬರ್ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಈ ದೇಶ ಕಂಡ ಅಪ್ರತಿಮ ನಾಯಕ. ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.
ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ ಅವರು ಮಹಾತ್ಮ ಗಾಂಧೀಜಿ ಅವರ ಜೀವನಚರಿತ್ರೆ, ಹೋರಾಟ, ತತ್ವಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ .
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಸಿ.ರೂಪಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…