ಗಾಂಧೀಜಿ ಉಜ್ವಲ ಭಾರತದ ಕನಸನ್ನು ನನಸಾಗಿಸಲು ದುಶ್ಚಟಗಳಿಂದ ದೂರ ಇರಬೇಕು-ದಿವ್ಯಜ್ಞಾನಾನಂದ ಸ್ವಾಮೀಜಿ

ಸತ್ಯ, ಅಹಿಂಸೆಯನ್ನು ಮಹಾತ್ಮ ಗಾಂದೀಜಿ ಅನುಸರಿಸಿದ ಪ್ರಬಲ ಅಸ್ತ್ರಗಳಾಗಿದ್ದು, ಗಾಂಧೀಜಿ ತತ್ವಾದರ್ಶಗಳ ರೂಢಿಸಿಕೊಂಡರೆ ಸಮಾಜದಲ್ಲಿ ಪೊಲೀಸ್‌ ಠಾಣೆಗಳ ಅವಶ್ಯಕತೆಯೇ ಇರುವುದಿಲ್ಲ. ಆದರೆ, ಒಂದು ಕಡೆ ಗಾಂಧೀಜಿ ಅವರ ನುಡಿಗಳನ್ನು ಹೇಳುತ್ತಾ ಅದಕ್ಕೆ ವ್ಯತಿರಿಕ್ತವಾಗಿ ನಡೆಯುತ್ತಿರುವುದು ದುರಂತದ ಸಂಗತಿ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕಾ ಸಂಶೋಧನಾ ಪರಿಷತ್‌ ಅಧ್ಯಕ್ಷ ಹುಲಿಕಲ್‌ ನಟರಾಜ್‌ ಹೇಳಿದರು.

ನಗರದ ಎ.ಬಿ.ಎಂ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ನಡೆದ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಧೂಮಪಾನ, ಮದ್ಯಪಾನ ಮೊದಲಾದ ದುಶ್ಚಟಗಳನ್ನು ತ್ಯಜಿಸುವ ಕುರಿತು ಮಾತಿನಲ್ಲಿಯೇ ಹೊರತು ಅನುಷ್ಟಾನಕ್ಕೆ ಬರುತ್ತಿಲ್ಲ. ಗಾಂಧೀಜಿ ತತ್ವಾದರ್ಶಗಳನ್ನು ಅನುಸರಿಸಿದರೆ ಈ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ. 12 ನೇ ಶತಮಾನದಲ್ಲಿ ಬಸವಣ್ಣನವರ ವಚನಗಳ ಸಾರವನ್ನು ಅರಿತರೆ, ಯಾವುದೇ ಕಾನೂನಿನ ಸೆಕ್ಷನ್‌ಗಳು ಬೇಕಿರಲಿಲ್ಲ. ಇಂದಿನ ಒತ್ತಡದ ಬದುಕಿನಲ್ಲಿ ಕುಡಿತಕ್ಕೆ ದಾಸರಾಗುತ್ತಿರುವುದು ಸಾಮಾನ್ಯವಾಗಿದ್ದು, ಆರೋಗ್ಯ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಈ ದುಶ್ಚಟಗಳಿಂದ ಹೊರಬರಬೇಕಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳು ಪ್ರಭಾವಶಾಲಿಯಾಗಿವೆ. ಮದ್ಯಮುಕ್ತ ಸಮಾಜದ ನಿರ್ಮಾಣದಿಂದ ಗಾಂಧಿ ಕನಸು ನನಸಾಗಿಸಬೇಕಿದೆ ಎಂದರು.

ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಮಾತನಾಡಿ, ನಮ್ಮಲ್ಲಿನ ಕೆಟ್ಟ ಭಾವನೆಗಳನ್ನು ಹೊರದೂಡಿ ಸದ್ಭಾವನೆಯನ್ನು ಬೆಳೆಸಿಕೊಳ್ಳಬೇಕು. ಗಾಂಧೀಜಿ ಅವರ ಉಜ್ವಲ ಭಾರತದ ಕನಸನ್ನು ನನಸಾಗಿಸುವಲ್ಲಿ ದುಶ್ಚಟಗಳಿಂದ ದೂರ ಇರಬೇಕು ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮರಬ್ಬ ಪ್ರಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಮದ್ಯ ವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.ಉದ್ಯೋಗ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯೋಜನೆಯ ವತಿಯಿಂದ 1985ಕ್ಕೂ ಹೆಚ್ಚು ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿದ್ದು, ಇದರಲ್ಲಿ 1.3 ಲಕ್ಷ ಶಿಬಿರಾರ್ಥಿಗಳು ಮದ್ಯ ವರ್ಜಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 36 ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿ 2082 ಶಿಬಿರಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯಲ್ಲಿ 719 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ದುಶ್ಚಟ ವಿವಿಧ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ 50 ಗ್ರಾಮಗಳನ್ನು ಪಾನಮುಕ್ತ ಗ್ರಾಮವನ್ನಾಗಿ ಮಾಡಿದ್ದು, ಮದ್ಯಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಕ್ರಮ ವಹಿಸಬೇಕು. ಶಾಲಾ ಕಾಲೇಜುಗಳ ಬಳಿ ಕಡ್ಡಾಯವಾಗಿ ಮದ್ಯದಂಗಡಿಗೆ ಪರವಾನಗಿ ನೀಡಬಾರದು ಎಂದು ಒತ್ತಾಯಿಸಲಾಗುತ್ತಿದೆ ಎಂದರು.

ಈ ವೇಳೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಎಚ್‌.ಎಸ್‌.ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟೀ ವಿ.ರಾಮಸ್ವಾಮಿ, ಜಿಲ್ಲಾ ಅಧ್ಯಕ್ಷ ಟಿ.ವೆಂಕಟೇಶ್, ಉಪಾಧ್ಯಕ್ಷ ವಿ.ನರಸಿಂಹರಾಜು, ಮುಖಂಡರಾದ ಟಿ.ಜಿ.ಮಂಜುನಾಥ್, ರವಿ, ಕೆಂಪಣ್ಣ,ಟಿ.ಮುನಿರಾಜು, ಕೆ.ಮಹಾಲಿಂಗಯ್ಯ, ಶಿಕ್ಷಕ ಎಂ.ಎಸ್‌.ರಾಜಶೇಖರ್, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಎಸ್‌.ವಿ.ನಂಜುಂಡೇಶ್ವರಸ್ವಾಮಿ, ತಾಲೂಕು ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕ ಲೋಹಿತ್ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

11 minutes ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

2 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

5 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

6 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

17 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

18 hours ago