Categories: ಕೋಲಾರ

ಗಾಂಧೀಜಿ ಜಯಂತಿ ಪ್ರಯುಕ್ತ ಬಜೆಪಿ ವತಿಯಿಂದ ಸ್ವಚ್ಚತಾ ಮತ್ತು ಸದಸ್ಯತ್ವ ಅಭಿಯಾನ

ಕೋಲಾರ: ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಪ್ರಯುಕ್ತ ನಗರದ ಟೇಕಲ್ ರಸ್ತೆಯ ಡಾ.ಬಿ.ಆರ್ ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬುಧವಾರ ಸ್ವಚ್ಚತಾ ಹಾಗೂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಬಿಜೆಪಿ ಪಕ್ಷದಿಂದ ದೇಶಾದ್ಯಂತ ಹಮ್ಮಿಕೊಂಡಿದ್ದೇವೆ ಗಾಂಧೀಜಿಯವರ ಕನಸು ನನಸು ಮಾಡಲು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕರ್ತರು ವಿನೂತನ ಕಾರ್ಯಕ್ರಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅಕ್ಟೋಬರ್‌ 2ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್‌ ಬಹದ್ದೂರು ಶಾಸ್ತ್ರಿ ಜಯಂತಿಯಾಗಿದ್ದು ಸ್ವದೇಶಿಯ ವಸ್ತುಗಳ ಬಳಕೆ, ಖಾದಿ, ಆತ್ಮನಿರ್ಭರತೆ, ಸರಳತೆ ಮತ್ತು ಶುಚಿತ್ವದ ಬಗ್ಗೆ ಅರಿವು ತರಲಾಗಿದೆ ಖಾದಿ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು ಮತ್ತು ಸ್ವಚ್ಚತೆಗೆ ಅಧ್ಯತೆ ನೀಡಬೇಕು ಮಹನೀಯರ ವಿಚಾರಗಳನ್ನು ಮೈಗೂಡಿಸಿಕೊಂಡು ಅವರ ಹಾದಿಯಲ್ಲಿ ನಾವು ನಡೆಯಬೇಕಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಖಜಾಂಚಿ ಮಹೇಶ್, ನಗರಾಧ್ಯಕ್ಷ ಸಾ.ಮಾ ಅನಿಲ್ ಕುಮಾರ್, ಮುಖಂಡರಾದ ಮಮತಾ, ಅಪ್ಪಿ ಮಂಜುನಾಥ್, ಲಾಲ್ ಚಾಂದ್, ಜೈನ್ ಮುಂತಾದವರು ಇದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

6 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

6 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

8 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

16 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

19 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago