
ಇಂದು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಬಟ್ಟೆ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಟ್ಟೆ ಲೆದರ್ ಸೇರಿ ಕೆಮಿಕಲ್ ವಸ್ತುಗಳು ಸುಟ್ಟು ಕರಕಲಾಗಿದ್ದು, ಕಾರ್ಖಾನೆಯ ಒಳಗೆ ಇದ್ದ ಮಷಿನರಿಗಳು ಸ್ಫೋಟಗೊಂಡಿವೆ.
ಸಮಯಕ್ಕೆ ಸರಿಯಾಗಿ SDRF ಮತ್ತು 6 ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಲಾಗುತ್ತಿದ್ದು. ಈ ವೇಳೆ ಯಾವುದೇ ಪ್ರಾಣ ಹಾನಿ ಉಂಟಾಗಿರುವುದಿಲ್ಲ. ಬೆಂಕಿ ಅವಘಡದಿಂದ ಕೋಟ್ಯಂತರ ರೂ. ನಷ್ಟವಾಗಿದೆ.