ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಹೇಳಿದರು.

ಗಾಳಿಪಟ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರದಲ್ಲಿ ಗಾಳಿಪಟ ಉತ್ಸವಗಳು ಹೆಚ್ಚಾಗಿ ನಡೆಯುತ್ತಿರುವುದು ಅಭಿನಂದನೀಯ. ಇಲ್ಲಿನ ಗಾಳಿಪಟ ಕಲಾವಿದರು ರಾಜ್ಯಮಟ್ಟದಲ್ಲಿಯೂ ಹೆಸರುವಾಸಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ಗಾಳಿಪಟ ಕಲೆಗೆ ವಿಶೇಷ ಖ್ಯಾತಿ ಪಡೆದಿದೆ. ಇಲ್ಲಿನ ಗಾಳಿಪಟ ಹವ್ಯಾಸಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ ಹಾರಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ರಾಷ್ಟ್ರೀಯ ಮಟ್ಟದ ಗಾಳಿಪಟ ಸ್ಪರ್ಧೆಯನ್ನು ಆಯೋಜಿಸಲು ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.

ನಗರಸಭೆ ಸದಸ್ಯ ತ.ನ. ಪ್ರಭುದೇವ ಮಾತನಾಡಿ, ಶಾಲಾ ಮಕ್ಕಳಲ್ಲಿ ಗಾಳಿಪಟ ಕಲೆಯ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸಿರುವುದು ಸ್ವಾಗತಾರ್ಹ. ಇಂತಹ ಉತ್ಸವಗಳು ಹೆಚ್ಚಾಗಿ ನಡೆದಾಗ ಜಾನಪದ ಕಲೆಗಳು ಉಳಿದು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಾಳಿಪಟ ಕಲಾ ಸಂಘದ ಅಧ್ಯಕ್ಷ ಎಲ್.ಎನ್. ಶ್ರೀನಾಥ್, ಕಾರ್ಯದರ್ಶಿ ಎ.ಎನ್. ಪ್ರಕಾಶ್, ಜಿಲ್ಲಾ ಘಟಕದ ಅಧ್ಯಕ್ಷ ಎ.ಎನ್. ಪ್ರಕಾಶ್, ನಗರಸಭೆ ಅಧ್ಯಕ್ಷೆ ಪ್ರಭಾ ನಾಗರಾಜ್, ಉಪಾಧ್ಯಕ್ಷ ವೆಂಕಟೇಶ್, ಸಂಘದ ಉಪಾಧ್ಯಕ್ಷ ಎಸ್. ಮುನಿರಾಜು, ಖಜಾಂಚಿ ವಿಶ್ವನಾಥ್, ಸಹ ಕಾರ್ಯದರ್ಶಿ ಜೆ.ವಿ. ಸುಬ್ರಹ್ಮಣ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

7 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

10 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

13 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

15 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

16 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago