ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.
ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…