Categories: ಕೋಲಾರ

ಗಿಡ ಮರ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.

ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಪ್ರದೇಶದಲ್ಲಿ 33% ಅರಣ್ಯ ಅವಶ್ಯಕತೆ ಇದ್ದು, ಗ್ಲೋಬಲ್ ಯುಗದಿಂದ ಇದು 17 % ಅರಣ್ಯ ಮಾತ್ರ ಇದ್ದು ನಾವುಗಳೇ ಮಾಡಿದ ತಪ್ಪಿಗೆ ಅರಣ್ಯ ನಾಶವಾಗಿದೆ. ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಾವುಗಳೇ ಕೊಡುಗೆಯಾಗಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಿಡಮರಗಳನ್ನು ನೆಟ್ಟು ಬೆಳೆಸೋಣ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

13 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

23 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago