ಗೀತಂನಲ್ಲಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರ ಉದ್ಘಾಟನೆ

 

ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಎಂಜಿನಿಯರಿಂಗ್ ಕಾಲಿನ್ಸ್ ಏರೋಸ್ಪೇಸ್ ನ ಉಪಾಧ್ಯಕ್ಷ ಸವ್ಯಸಾಚಿ ಶ್ರೀನಿವಾಸ್ ಅವರು ಉದ್ಘಾಟನೆ ಮಾಡಿದರು.

ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಗೀತಂ ಯೂನಿರ್ವಸಿಟಿಯ ಉಪಕುಲಪತಿ ಪ್ರೊ. ಕೆ.ಎನ್ ಎಸ್ ಆರ್ಚಾಯ ಮಾತನಾಡಿ, ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಉಪಯೋಗವಾಗಲಿದೆ. ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೋರ್ಸ್ ಮುಗಿಯುವದೊಳಗೆ ಒಳ್ಳೆ ಸಂಬಳ ಸಿಗುವ ಕೆಲಸ ಪಡೆಯಬಹುದು ಎಂದರು.

ಸಿರೆನಾ ಟೆಕ್ನೋಲಾಜೀಸ್ ಕಂಪನಿಗೆ ನಮ್ಮ ಕಾಲೇಜಿನಿಂದ ಈಗಾಗಲೇ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದು ನಮ್ಮ ಯೂನಿರ್ವಸಿಟೆಗೆ ಹೆಮ್ಮೆಯ ಸಂಗತಿ. ಮುಂದೆ ಈ ಕೋರ್ಸ್ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸಿಗುವಂತೆ ಆಗಲಿ ಎಂದು ಆಶಿಸಿದರು.

ನಾಲ್ಕು ವರ್ಷಗಳ ರೋಬೋಟಿಕ್ ಮತ್ತು ಎಐ ಇಂಟೆಲಿಜೆನ್ಸ್ ಕೋರ್ಸ್ ವಿದ್ಯಾರ್ಥಿಗಳನ್ನು ಪರಿಗಣಿತರಾಗಿಸುವುದಷ್ಟೇ ಅಲ್ಲದೇ ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರಯೋಗಿಕವಾಗಿ ರೋಬೋಟಿಕ್ ಸೈನ್ಸ್ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನಮ್ಮ ಗೀತಂ ವಿಶ್ವವಿದ್ಯಾಲಯವು ನೂತನ ಪ್ರಯತ್ನಕ್ಕೆ ಮುಂದಾಗಿದ್ದು, ನಮ್ಮ ಪ್ರಯತ್ನಕ್ಕೆ ಸಿರೆನಾ ಟೆಕ್ನೋಲಾಜೀಸ್ ಸಹಕಾರ ನೀಡಿದೆ ಎಂದರು.

ವಿದ್ಯಾರ್ಥಿಗಳನ್ನು ಕಲಿಕಾ ಹಂತದಲ್ಲೇ ಪ್ರಾಯೋಗಿಕವಾಗಿ ಪರಿಣಿತಿಪಡೆಯಲು ಸಹಕಾರಿಯಾಗಿದೆ. ಸತತ ಮೂರು ತಿಂಗಳ ನಮ್ಮೆಲ್ಲರ ಪ್ರಯತ್ನ‌ ಇಂದು ಇದು ಫಲದಾಯಕವಾಗಿದೆ ಎಂದರು.

ಈ ವೇಳೆ ಸಿರೆನಾ ಟೆಕ್ನೋಲಾಜೀಸ್ ನ ಹರಿಹರನ್ ಭೋಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕದ ನೂತನ ರಾಜ್ಯಪಾಲರು ಯಾರು ಗೊತ್ತಾ…?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…

8 hours ago

ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಜಿ. ಲಕ್ಷ್ಮೀಪತಿ

ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…

13 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2026: ಅಂತಿಮ ಮತದಾರ ಪಟ್ಟಿಯಲ್ಲಿ 2863 ಶಿಕ್ಷಕ ಮತದಾರರು : ಡಿಸಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…

14 hours ago

ಸಿಮೆಂಟ್ ಲಾರಿ–ಕಂಟೇನರ್ ನಡುವೆ ಅಪಘಾತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ…

20 hours ago

ನಾಯಿ ಕಡಿತದ ಸುಳಿಗೆ ಮಕ್ಕಳು: ನಾಲ್ಕು ವರ್ಷದಲ್ಲಿ 4.21 ಲಕ್ಷ ಪ್ರಕರಣ: ರೇಬಿಸ್‌ಗೆ ಮಕ್ಕಳ ಸಾವು

ಬೆಂಗಳೂರು ಗ್ರಾಮಾಂತರ: ಶಾಲೆಗೆ ಹೋಗುವ ದಾರಿ, ಅಂಗನವಾಡಿಯ ಅಂಗಳ, ಆಟವಾಡುವ ಮೈದಾನ... ಹೀಗೆ ಮಕ್ಕಳ ಸುರಕ್ಷಿತ ಬಾಲ್ಯ ಕಳೆಯಬೇಕಾದ ಜಾಗಗಳಲ್ಲೇ…

23 hours ago

ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

1 day ago