ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ ಓದಿದರೆ ಒಳ್ಳೆ ಮನೆಗೆ ಕೊಟ್ಟು ಮದುವೆ ಮಾಡಬಹುದು ಎಂದು ಕನಸು ಕಂಡು,‌ ಇಂಜಿನಿಯರಿಂಗ್ ವ್ಯಾಸಾಂಗ ಮಾಡಲು ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಆದರೆ ಆಕೆಗೆ ಅದೇನಾಯ್ತೋ ಏನೋ ಗೊತ್ತಿಲ್ಲ. ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೌದು ಹೀಗೆ 13 ನೇ ಮಹಡಿಯಿಂದ ಕೆಳಗೆ ಬಿದ್ದಿರುವ ಯುವತಿ, ಅಯ್ಯೋ ಮಗಳಿಗೆ ಏನಾಯ್ತೋ ಏನೋ ಅಂತಾ ಶವಾಗಾರದ ಮುಂದೆ ಬಂದಿರುವ ಕುಟುಂಬಸ್ಥರು. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಶವಾಗಾರದ ಮುಂದೆ. ಹೌದು ಪ್ರತಿಷ್ಠಿತ ಗೀತಂ ಯೂನಿವರ್ಸಿಟಿಯಲ್ಲಿ ನೆನ್ನೆ 13 ನೇ ಮಹಡಿಯಿಂದ ನಯನಾ (19) ಎಂಬ ಯುವತಿ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಬ್ಬಕ್ಕೆ ಎಂದು ಮನೆಗೆ ಹೋಗಿದ್ದ ನಯನಾ ಫೆ.15 ರಂದು ಮತ್ತು ಕಾಲೇಜಿಗೆ ಬಂದಿದ್ದಳು. ನಗು ನಗುತ್ತಾ ಮಗಳನ್ನು ಕಾಲೇಜಿಗೆ ಬಿಟ್ಟು ಹೋಗಿದ್ದ ಪೋಷಕರಿಗೆ ರಾತ್ರಿ ಕಳೆದು ಹಗಲು ಆಗುತ್ತಿದ್ದಂತೆ ಮಗಳ ಸಾವಿನ ಸುದ್ದಿ ಬಂದಿದೆ.

ಇನ್ನೂ ಮನೆಗೆ ಇದ್ದ ಏಕೈಕ‌ ಮಗಳು ನಯನಾ. ಹಾಗಾಗಿಯೇ ಒಳ್ಳೆಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿಸಬೇಕು ಎಂದು, ಲಕ್ಷಾಂತರ ರೂಪಾಯಿ ಹಣ ಕಟ್ಟಿ ಓದಿಸುತ್ತಿದ್ದರು. ಆದರೆ, ಮಗಳು ಖಿನ್ನತೆಗೋ ಅಥವಾ ಬೇರೆಯಾವುದೋ ಕಾರಣಕ್ಕೋ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಕಾಲೇಜಿನ ಪಿಜೆಯಲ್ಲಿ ಲಿಫ್ಟ್ ಮಾಡುವ ಜಾಗದಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾವುದೇ ಮುಂಜಾಗ್ರತೆ ಇಲ್ಲದೆ ಇರುವುದನ್ನು ಪೋಷಕರು ಖಂಡಿಸುತ್ತಿದ್ದಾರೆ. ಲಿಫ್ಟ್ ಮಾಡುವ ಜಾಗದಲ್ಲಿ ಮುಂಜಾಗ್ರತಾ ಕ್ರಮ ತಗೆದುಕೊಂಡು ನೆಟ್ ಅಳವಡಿಸಿದ್ದರೆ ಒಂದು ಪ್ರಾಣ ಉಳಿಯುತ್ತಿತ್ತು. ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ‌.

ಘಟನೆ ಕುರಿತು  ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೋಲೀಸರು ಯುವತಿಯ ಸಾವಿಗೆ ನಿಖರ ಕಾರಣ ಹುಡುಕಾಡುತ್ತಿದ್ದಾರೆ.

ಗೀತಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ಎಸ್ಪಿ ಚಂದ್ರಕಾಂತ್ ಪ್ರತಿಕ್ರಿಯೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಾಣಿಸುತ್ತಿದೆ.

ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ನಯನಾ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ‌ ಹಾಸ್ಟೆಲ್ ನಲ್ಲಿ ವಾಸವಿದ್ದಳು. ಕಾಲೇಜಿನಲ್ಲಿ ಲಿಫ್ಟ್ ಕೆಲಸ ನಡೆಯುತ್ತಿದೆ. 13 ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಚಂದ್ರಕಾಂತ್ ಹೇಳಿಕೆ ನೀಡಿದ್ದಾರೆ.

ಲಿಫ್ಟ್ ಮಾಡುವ ಜಾಗದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಇಲ್ಲ.  ಕಾಲೇಜು ಮಂಡಳಿಯ ನಿರ್ಲಕ್ಷ್ಯ ವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಒಟ್ಟಾರೆ ಬಾಳಿ ಬದುಕ ಬೇಕಿದ್ದ ಯುವತಿ ಅದು ಯಾವ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದು ನಿಗೂಡ. ಯುವತಿ ಸಾವಿನ ನಿಖರ ಕಾರಣ ಪೋಲೀಸ್ ತನಿಖೆಯ ನಂತರವೇ ತಿಳಿಯಬೇಕಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ಯುವಕ, ಯುವತಿಯರು ಆತ್ಮಹತ್ಯೆ ಕಡೆಗೆ ಮುಖ ಮಾಡುತ್ತಿರುವುದು ವಿಪರ್ಯಾಸ….

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

4 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

5 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

7 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

12 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

16 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago