ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಳೆದ ರಾತ್ರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಗೀತಂ ವಿಶ್ವವಿದ್ಯಾಲಯದ ಬಿ.ಟೆಕ್ ವಿದ್ಯಾರ್ಥಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಗೀತಂ ಆಡಳಿತ ಮಂಡಳಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ಪೊಲೀಸರು ಬರುವವರೆಗೂ ಕಾಯದೇ ಮೃತದೇಹ ತೆರವು ಮಾಡಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಗೀತಂ ವಿ.ವಿಯಲ್ಲಿ ಈ ಹಿಂದೆ ಕೂಡ ಹಲವು ವಿದ್ಯಾರ್ಥಿಗಳು ನಿಗೂಢವಾಗಿ ಮೃತಪಟ್ಟಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ವಿದೇಶಿ ಮೂಲದ ವಿದ್ಯಾರ್ಥಿ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಇನ್ನೊಬ್ಬ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದರು. ಮತ್ತೊಬ್ಬ ವಿದ್ಯಾರ್ಥಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗೆ ಸಾಲು ಸಾಲು ವಿದ್ಯಾರ್ಥಿಗಳ ಸಾವು ಮುಂದುವರಿದರೂ ಆಡಳಿತ ಮಂಡಳಿ ಯಾವುದೇ ಕ್ರಮ ಜರುಗಿಸದಿರುವುದು ಯಕ್ಷ ಪ್ರಶ್ನೆಯಾಗಿದೆ.
ಗೀತಂ ಕಾಲೇಜು ಸುತ್ತಮುತ್ತ ಗಾಂಜಾ ಮಾರಾಟ ಅವ್ಯಾಹತವಾಗಿದ್ದು, ಪದೇ ಪದೇ ಗಲಾಟೆಗಳು ಕೂಡ ನಡೆದಿದ್ದರೂ ಆಡಳಿತ ಮಂಡಳಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…