
ತಾಲೂಕಿನ ಗುಂಜೂರುವ ಗ್ರಾಮದ ಹೊರವಲಯದಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಗುಂಜೂರು ಬಳಿ ಹಾದುಹೋಗಿರುವ ಹಿಂದೂಪುರ- ಯಲಹಂಕ ಹೆದ್ದಾರಿಯಲ್ಲಿ ಸೋಮವಾರ(ಡಿ.16)ರ ರಾತ್ರಿ ಈ ಕೃತ್ಯ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಗೆ ಅಪಘಾತವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯ ಹೆಸರು, ವಿಳಾಸ ಪತ್ತೆಯಾಗಿರುವುದಿಲ್ಲ. ಮೃತ ಮಹಿಳೆಯ ಗುರುತು ಪತ್ತೆ ಮಾಡಲು ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಸದ್ಯ ಶವ ದೊಡ್ಡಬಳ್ಳಾಪುರ ಶವಗಾರದಲ್ಲಿದ್ದು, ಮೃತ ಮಹಿಳೆಯ ವಾರಸುದಾರರು ಯಾರಾದರು ಇದ್ದಲ್ಲಿ, ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….