ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು 6ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಗುಂಡಮ್ಮಗೆರೆ ಕ್ರಾಸ್ ಬಳಿ ನಡೆದಿದೆ…

ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ತೋಂಡೇಬಾವಿಯಿಂದ ದೊಡ್ಡಬಳ್ಳಾಪುರದ ಕಡೆಗೆ ಖಾಸಗಿ‌ ಕಂಪನಿ ಬಸ್ ಬರುವ ವೇಳೆ ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ..

ಡಿಕ್ಕಿ ರಭಸಕ್ಕೆ ಬೈಕ್ ಬಸ್ಸಿನಡಿ ಸಿಲುಕಿಕೊಂಡಿದ್ದು, ಹಲವು ಮೀಟರ್ ದೂರದಷ್ಟು ಎಳದೊಯ್ದಿದೆ. ಬಸ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರ ಸಹಾಯದಿಂದ ಬೈಕ್ ಸವಾರನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ…

ಗಾಯಾಳುವಿನ ಹೆಸರು, ವಯಸ್ಸು, ವಿಳಾಸ ತಿಳಿದುಬಂದಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

28 minutes ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

2 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

4 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

9 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

13 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago