ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಮೈದಾನದ ರಸ್ತೆಯಲ್ಲಿ ಬಾಯ್ತೆರೆದಿರುವ ಚರಂಡಿ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದು, ರಸ್ತೆಯಲ್ಲಿನ ಗುಂಡಿ ತಪ್ಪಿಸುವ ಸಂದರ್ಭದಲ್ಲಿ ಆಟೋವೊಂದು ನಿಯಂತ್ರಣ ತಪ್ಪಿ ತೆರೆದ ಚರಂಡಿಗೆ ಉರುಳಿರುವ ಘಟನೆ ನಡೆದಿದೆ.
ಈ ರಸ್ತೆಯಲ್ಲಿ ಗುಂಡಿಗಳು ಹಾಗೂ ಸುರಕ್ಷತಾ ಮುಚ್ಚಳವಿಲ್ಲದೆ ತೆರೆದಿರುವ ಚರಂಡಿಯಿಂದಾಗಿ ವಾಹನ ಸವಾರರು ಆತಂಕದಲ್ಲೇ ಸಂಚರಿಸುವಂತಾಗಿದೆ. ಪ್ರತಿನಿತ್ಯ ನೂರಾರು ವಾಹನಗಳು ಮತ್ತು ಸಾರ್ವಜನಿಕರು ಓಡಾಡುವ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರೂ ಚರಂಡಿಗೆ ಬೀಳುವ ಅಪಾಯ ಎದುರಿಸುತ್ತಿದ್ದಾರೆ.
ಚರಂಡಿಗೆ ಸುರಕ್ಷತಾ ಸ್ಲ್ಯಾಬ್ ಅಳವಡಿಸದೆ ಹಾಗೂ ರಸ್ತೆಯ ಗುಂಡಿಗಳನ್ನು ಮುಚ್ಚದೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಣ್ಣಪುಟ್ಟ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಭಗತ್ ಸಿಂಗ್ ಮೈದಾನದ ರಸ್ತೆಯಲ್ಲಿರುವ ತೆರೆದ ಚರಂಡಿಗೆ ತಕ್ಷಣ ಗುಣಮಟ್ಟದ ಸ್ಲ್ಯಾಬ್ ಅಳವಡಿಸಬೇಕು. ಜೊತೆಗೆ ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ತಾಲ್ಲೂಕು ಆಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.
ಅವಘಡ ಸಂಭವಿಸಿದ ಬಳಿಕ ಪರಿಹಾರ ಕ್ರಮ ಕೈಗೊಳ್ಳುವ ಬದಲು, ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು. ಅಮಾಯಕರ ಜೀವಕ್ಕೆ ಅಪಾಯ ಎದುರಾಗುವ ಮುನ್ನ ಅಧಿಕಾರಿಗಳು ಎಚ್ಚರಗೊಳ್ಳಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ದೊಡ್ಡಬಳ್ಳಾಪುರ: ನಗರದ ತೆರಿನಬೀದಿ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ವಾಲ್ಮೀಕಿ ಭವನದ ಕಟ್ಟಡ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಅನುದಾನದ…
ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿ ಬಂದು ಅಹವಾಲು ಸ್ವೀಕರಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ಶನಿವಾರ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಮಾಜ…
ದೊಡ್ಡಬಳ್ಳಾಪುರ: ಡಿಮೆನ್ಸಿಯಾದಿಂದ ಬಳಲುತ್ತಿರುವ ಅಸಹಾಯಕ ಹಿರಿಯ ನಾಗರಿಕರಿಗೆ ಗೌರವಯುತ, ಸುರಕ್ಷಿತ ಹಾಗೂ ಗುಣಮಟ್ಟದ ಆರೈಕೆ ಒದಗಿಸುವ ಉದ್ದೇಶದಿಂದ ತಾಲೂಕಿನ ತಿರುಮಗೊಂಡನಹಳ್ಳಿ…
ದೊಡ್ಡಬಳ್ಳಾಪುರ: ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ (ಟಿಬಿ ವೃತ್ತ) ಸಮೀಪದ ಪ್ರವಾಸಿ ಮಂದಿರದ ಬಳಿ ಬೃಹತ್ ಮರವೊಂದು ಬುಡಸಮೇತ ಧರೆಗುರುಳಿದ…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು…