ಕೋಲಾರ: ತಾಲೂಕಿನ ಬೆಳಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಟ್ಟಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕರಗದಮ್ಮ ದೇವಾಲಯದ ಪ್ರತಿಷ್ಟಾಪನೆಯಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಮುಖಂಡರು ಗ್ರಾಮಸ್ಥರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ ಕೋಲಾರ ಕ್ಷೇತ್ರದ ಜನತೆಗೆ ನೆಮ್ಮದಿ ತರುವಂತೆ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡಿರುವ ಕರಗದಮ್ಮ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದೇವೆ. ಯಾವುದೇ ದೇವರು ಆಗಿರಲಿ ಶ್ರದ್ಧಾ ಭಕ್ತಿಯಿಂದ ದರ್ಶನ ಮಾಡಿದಾಗ ಮಾತ್ರ ಅದರ ಪೂರ್ಣ ಫಲ ನಮಗೆ ಪ್ರಾಪ್ತವಾಗುತ್ತದೆ ಈ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಚೆನ್ನಾಗಿ ಮಳೆಯಾಗಿ ರೈತರ ಸಂಕಷ್ಟದಿಂದ ದೂರವಾಗಿ ಸುಖ, ಸಂತೋಷವನ್ನು ತರುವಂತಾಗಲಿ ಎಂದರು
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರವು ಕಳೆದ ಒಂದು ವರ್ಷದಿಂದ ಜನತೆಗಾಗಿ ಮಾಡಿರುವ ಹಲವಾರು ಗ್ಯಾರಂಟಿ ಯೋಜನೆಗಳು, ಬಡವ, ದಲಿತರ, ಅಲ್ಪಸಂಖ್ಯಾತರು ಸಾಮಾನ್ಯ ವರ್ಗಗಳು ಸೇರಿದಂತೆ ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮುಖ್ಯವಾಹಿನಿಗೆ ತರುವ ಮಹತ್ವಾಕಾಂಕ್ಷೆಯ ಯೋಜನೆಗಳಾಗಿವೆ ಈ ಯೋಜನೆಗಳಿಂದ ನಾಡಿನ ಪ್ರತಿಯೊಬ್ಬರೂ ನೆಮ್ಮದಿಯ ವಾತಾವರಣ ತರುವಂತೆ ಮಾಡಿದ್ದಾರೆ ಎಂದರು.
ರಾಜ್ಯದ ಕಾಂಗ್ರೆಸ್ ಸರಕಾರವು ಜನಪರವಾದ ಯೋಜನೆಗಳ ಮೂಲಕ ಜನ ಮೆಚ್ಚುಗೆ ಪಡೆದಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಅಷ್ಟು ಭರವಸೆಯನ್ನು ಸರಕಾರವು ಈಡೇರಿಸಿದೆ ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳನ್ನು ಜನತೆಗೆ ಜನಪರವಾದ ಯೋಜನೆಗಳ ಮೂಲಕ ತಲುಪಿಸುತ್ತಿರುವುದರಿಂದ ಈ ಸರಕಾರವು ಜನತೆಯ ಮನೆಯ ಮಾತಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೈ.ಶಿವಕುಮಾರ್, ದೊಡ್ಡ ಹಸಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕನಕರಾಜ್, ತೋರಣಕಂಬದಹಳ್ಳಿ ನಾರಾಯಣಸ್ವಾಮಿ, ಕಲ್ವಮಂಜಲಿ ಶ್ರೀರಾಮಪ್ಪ, ಕುಮಾರ್, ನುಕ್ಕನಹಳ್ಳಿ ಶ್ರೀನಿವಾಸ್, ಡಿಎಚ್ಒ ಜಗದೀಶ್, ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು,
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…