ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ-ಸೂಚನೆಗಳು

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ / ಸೂಚನೆಗಳನ್ನು ನೀಡಿರುತ್ತದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದ್ದಾರೆ.

ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳು

ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ / ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNMDC) ಹಾಗೂ Indian Meteorological Department (IMD) ನಿಂದ ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocol (CAP)ನ ಮೂಲಕ ಪ್ರಸಾರ ಮಾಡುವುದು. ಈ ಕುರಿತು ಅರಿವು ಮೂಡಿಸುವುದು.

ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕವೂ ಸಹ ಮಾಹಿತಿ ನೀಡುವುದು ಹಾಗೂ ಜಾಗೃತಿ ಮೂಡಿಸುವುದು.

ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡುವುದು.

ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಮಾಹಿತಿ ಶಿಕ್ಷಣ ಸಂವಹನ (ಐಇಸಿ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು Common Alerting Protocol (CAP) ಮುಖಾಂತರ ಬರುವ ಮಸೇಜ್‌ಗಳನ್ನು ಮೊಬೈಲ್‌ನಲ್ಲಿ ಗಮನಿಸಿಸುವುದು.

ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು,
ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯುವುದು.

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ
ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.

ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು.

ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ. ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ
ಪಡೆಯುವುದು.

ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು
ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು
ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು
ಮುಚ್ಚಿಕೊಳ್ಳುವುದು.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.

ಅರಣ್ಯ ಪುದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.

ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.

ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು.

ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.

ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.

ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.

ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಹೊಗೆಯಬಾರದು.

ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು – ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು.

ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.

ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.

ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ
ಪಡೆಯುವುದು.

ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ, ವಾಹನದ ಒಳಗೆ ಇರುವುದು.

ಅರಣ್ಯ, ಪುದೇಶದಿಂದ, ಗಿಡ-ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು, ಮಿಂಚಿನ ಹೊಡೆತದಿಂದಾಗಿ ಕಾಡಿಚ್ಚು, ಸಂಭವಿಸುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಅವರು ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

5 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

9 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago