ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಜಿಲ್ಲಾಡಳಿತದಿಂದ ಸಲಹೆ-ಸೂಚನೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳನ್ನು ನೀಡಿದೆ.

*ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು*

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ Alerts / ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಇವು ಸಿಡಿಲನ್ನು ಆಕರ್ಷಿಸುತ್ತವೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.

ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.

ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು. ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

9 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

10 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

10 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

10 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

13 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

17 hours ago