ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಖಾಸಗಿ ಶಾಲೆಗಳಲ್ಲಿ ನೀಡುವಂತಹ ಶಿಕ್ಷಣ ಸೌಲಭ್ಯವು ಸರ್ಕಾರಿ ಶಾಲೆಗಳಲ್ಲಿ ಸಿಗುವಂತಾಗಬೇಕು, ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳನ್ನು ಉನ್ನತ ಹುದ್ದೆಗಳಿಗೆ ಕೊಂಡೊಯ್ಯಲು ಶಿಕ್ಷಕರು ಶ್ರಮವಹಿಸಬೇಕೆಂದು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹೊಸಕೋಟೆ ಟೌನ್ ನ ಸ್ವಾಮಿ ವಿವೇಕಾನಂದ ನಗರದ ಶ್ರೀವಾರಿ‌ ಕಲ್ಯಾಣ ಮಂಟಪ ದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಆಹಾರ ಮತ್ತು ನಾಗರಿಕ‌ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಾಜಿ ರಾಷ್ಟ್ರಪತಿಗಳಾದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಿ.ಎಸ್.ಆರ್ ಅನುದಾನವನ್ನು ಬಳಸಿಕೊಳ್ಳಲು ಕ್ರಮವಹಿಸಲಾಗುವುದು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿ, ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಬೇಕು. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳೇ ಮೇಲುಗೈ ಸಾಧಿಸಬೇಕು, ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಶಿಕ್ಷಕರ ಕೊಡುಗೆ ಅಪಾರವಾದದ್ದು ಎಂದರು.

ಚಿಕ್ಕಬಳ್ಳಾಪುರ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಹೆಣ್ಣುಮಕ್ಕಳ ಪಾತ್ರ ಅಪಾರವಾದದ್ದು, ಪರೀಕ್ಷಾ ಫಲಿತಾಂಶಗಳಲ್ಲಿ ಹೆಚ್ಚಾಗಿ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನ ದಾಸ್ ಅವರು ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಸುಲಭ ರೀತಿಯಲ್ಲಿ ಅರ್ಥವಾಗುವಂತೆ ಕಥೆಗಳ ರೂಪದಲ್ಲಿ ಪಾಠಗಳನ್ನು ಬೋಧನೆ ಮಾಡಬೇಕು. ವಿದ್ಯಾವಂತರು ಉನ್ನತ ಮಟ್ಟಕ್ಕೆ ತಲುಪುತ್ತಾರೆ ಅವಿದ್ಯಾವಂತರು ಹಾಗೆಯೇ ಉಳಿಯುತ್ತಾರೆ. ಮೌಲ್ಯಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲೆಯ 17 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಕಂಠಯ್ಯ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕ ವೃಂದ, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

5 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

5 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

6 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

14 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

17 hours ago