ಕೋಲಾರ: ಸಂವಿಧಾನದ ಬಗ್ಗೆ ಗೌರವ ಇದ್ದರೆ ಗುತ್ತಿಗೆದಾರ ಸಾವಿಗೆ ಕಾರಣವಾದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲಿ ಎಂದು ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಮುಖಂಡರಾದ ಯಲುವಗುಳಿ ನಾಗರಾಜ್, ಜಯನಗರ ಮುನಿಯಪ್ಪ, ಹಾರೋಹಳ್ಳಿ ನಾಗರಾಜ್ ಜಂಟಿಯಾಗಿ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್‌ಖರ್ಗೆ ಅವರ ಪಾತ್ರವಿರುವುದು ಸ್ಪಷ್ಟವಾಗಿದೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಈಶ್ವರಪ್ಪ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಿದ್ದಾರೆ ನಿಮಗೆ ಏನಾದರೂ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಮಾತಲ್ಲಿ ಸಂವಿಧಾನ ಅಂಬೇಡ್ಕರ್ ಇದ್ದರೆ ಅಷ್ಟೇ ಸಾಲದು ನಡುವಳಿಕೆಯಲ್ಲಿ ಸಹ ಇರಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾಗಿದೆ ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆ ರಾಜರಾಜೇಶ್ವರಿ ನಗರದಲ್ಲಿ ಮಾಜಿ ಸಚಿವ ಮುನಿರತ್ನ ಮೇಲೆ ಹಲ್ಲೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಾಗಿದೆ ಇನ್ನೂ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಸರ್ಕಾರಕ್ಕೆ ಗೌರವ ಇದ್ದರೆ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…