Categories: ಕೋಲಾರ

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ವಿಚಾರ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯ

ಕೋಲಾರ: ಸಂವಿಧಾನದ ಬಗ್ಗೆ ಗೌರವ ಇದ್ದರೆ ಗುತ್ತಿಗೆದಾರ ಸಾವಿಗೆ ಕಾರಣವಾದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲಿ ಎಂದು ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಮುಖಂಡರಾದ ಯಲುವಗುಳಿ ನಾಗರಾಜ್, ಜಯನಗರ ಮುನಿಯಪ್ಪ, ಹಾರೋಹಳ್ಳಿ ನಾಗರಾಜ್ ಜಂಟಿಯಾಗಿ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್‌ಖರ್ಗೆ ಅವರ ಪಾತ್ರವಿರುವುದು ಸ್ಪಷ್ಟವಾಗಿದೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಈಶ್ವರಪ್ಪ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಿದ್ದಾರೆ ನಿಮಗೆ ಏನಾದರೂ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಮಾತಲ್ಲಿ ಸಂವಿಧಾನ ಅಂಬೇಡ್ಕರ್ ಇದ್ದರೆ ಅಷ್ಟೇ ಸಾಲದು ನಡುವಳಿಕೆಯಲ್ಲಿ ಸಹ ಇರಬೇಕು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾಗಿದೆ ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆ ರಾಜರಾಜೇಶ್ವರಿ ನಗರದಲ್ಲಿ ಮಾಜಿ ಸಚಿವ ಮುನಿರತ್ನ ಮೇಲೆ ಹಲ್ಲೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಾಗಿದೆ ಇನ್ನೂ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಸರ್ಕಾರಕ್ಕೆ ಗೌರವ ಇದ್ದರೆ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

  ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ…

31 minutes ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

23 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago