ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ-ಡಿಸ್ಟ್ರಿಕ್ ಮಿಷನ್ ಕೊ- ಆರ್ಡಿನೇಟರ್, ಹುದ್ದೆ- ಸಂಖ್ಯೆ 01, ವಿದ್ಯಾರ್ಹತೆ: ಸಮಾಜ ವಿಜ್ಞಾನ, ಲೈಪ್ ಸೈನ್ಸ್, ನ್ಯೂಟ್ರಿಷನ್, ಮೆಡಿಸನ್, ಹೆಲ್ತ್ ಮ್ಯಾನೇಜಮೆಂಟ್, ಸಮಾಜ ಕಾರ್ಯ, ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು ಹಾಗೂ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಹುದ್ದೆ-ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟ್ರಸಿ ಅಂಡ್ ಅಕೌಂಟೆಂಟ್. ಹುದ್ದೆ ಸಂಖ್ಯೆ-01 ವಿದ್ಯಾರ್ಹತೆ:ಅರ್ಥಶಾಸ್ತ್ರ/ಬ್ಯಾಂಕಿಂಗ್/ಬಿ.ಕಾಂ ನಲ್ಲಿ ಪದವಿ, ಸ್ನಾತಕೋತ್ತರ ಪದವೀಧರರಿಗೆ ಮೊದಲ ಆದ್ಯತೆ ನೀಡಲಾಗುವುದು. ಆರ್ಥಿಕ ಸಾಕ್ಷರತೆ/ಆರ್ಥಿಕ ಸೇರ್ಪಡೆ ಕೇಂದ್ರಿತ ವಿಷಯಗಳಲ್ಲಿ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಮುಂತಾದ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ 080- 29787445 ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸ ಬಹುದಾಗಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 22 ಸಂಜೆ 5.00 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…