Categories: ಕೋಲಾರ

ಗುತ್ತಿಗೆ ನೌಕರರ ಖಾಯಂಗೊಳಿಸಲು ಸೆ.30 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಸೆ‌.30 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಕಾರ್ಮಿಕರ ಮೇಲಿನ ಶೋಷಣೆ ದಬ್ಬಾಳಿಕೆ ಇನ್ನೂ ನಿಂತಲ್ಲ ಜನಸಂಖ್ಯೆ ಹೆಚ್ಚಳಕ್ಕೆ ತಕ್ಕಂತೆ ಉದ್ಯೋಗ ಅವಕಾಶಗಳನ್ನು ಸೃಷ್ಟಿ ಮಾಡಬೇಕು ಯುವಜನತೆ ಉದ್ಯೋಗದ ಆಸೆಯಲ್ಲಿ ಕೈಗಾರಿಕೆಗಳು ಮತ್ತು ಕಛೇರಿಗಳಲ್ಲಿ ಕಡಿಮೆ ವೇತನಕ್ಕೆ ದುಡಿಯುವಂತಾಗಿದೆ ಗುತ್ತಿಗೆ, ಹೊರಗುತ್ತಿಗೆ, ಹಂಗಾಮಿ ಸೇರಿದಂತೆ ಎಲ್ಲಾ ಖಾಯಂಯೇತರ ಕಾರ್ಮಿಕರಿಗೆ ಕೆಲಸದ ಭದ್ರತೆಯನ್ನು ಸರಕಾರಗಳು ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಲಕ್ಷಾಂತರ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ವಿಶೇಷ ಸೌಲಭ್ಯವಿಲ್ಲದೆ ಸುಮಾರು 25-30 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಪ್ರಸ್ತುತ ನೀಡುತ್ತಿರುವ ವೇತನವು ಅತ್ಯಂತ ಕಡಿಮೆ ಇದ್ದು, ಕನಿಷ್ಠ ಜೀವನ ಸಾಗಿಸುವುದೂ ಕಷ್ಟವಾಗಿದೆ ಮುಂದೆ ನಿವೃತ್ತಿಯಾದರೆ ಗ್ರಾಚ್ಯೂಟಿ ಸಹ ಇಲ್ಲವಾಗಿದೆ ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಲು ಸರಕಾರವು ಕ್ರಮವಹಿಸಬೇಕು ಎಂದರು.

ಹಿರಿಯ ಕಾರ್ಮಿಕ ಮುಖಂಡ ಎ.ಆರ್ ಬಾಬು ಮಾತನಾಡಿ, ಕೇಂದ್ರ ಸರಕಾರದ ಒಡೆತನದ ಸಾರ್ವಜನಿಕ ಉದ್ಯಮಗಳಾದ ಬೆಮಲ್, ಹೆಚ್ಎಎಲ್, ಬಿಇಎಲ್, ಬಿಎಸ್ಎನ್ಎಲ್, ಬಿಹೆಚ್ಇಎಲ್ ಸೇರಿದಂತೆ ಪ್ರತಿಷ್ಠಿತ ಕೈಗಾರಿಕೆಗಳು ರಾಜ್ಯ ಸರಕಾರದ ವಿವಿಧ ಇಲಾಖೆಗಳು ನಿಗಮ ಮಂಡಳಿಗಳು ನಗರಸಭೆ ಪುರಸಭೆಗಳಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿದ್ದರೂ ಖಾಯಂ ಮಾಡಲು ನಿರಾಕರಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಹಲವು ತೀರ್ಪುಗಳನ್ನು ನೀಡಿದ್ದರೂ ಜಾರಿ ಮಾಡಿಲ್ಲ ಇದರಿಂದಾಗಿಯೇ ಕಾರ್ಮಿಕರು ಬೀದಿಗೆ ಬಂದಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಕಾರ್ಮಿಕರನ್ನು ಶೋಷಣೆ ಮಾಡುವ ಗುತ್ತಿಗೆ ಹೊರಗುತ್ತಿಗೆ ಪದ್ದತಿಯನ್ನು ನಿಷೇಧಿಸಬೇಕು ಖಾಯಂಯೇತರ ನೌಕರರಿಗೆ ಪಿ.ಎಫ್, ಇಎಸ್ಐ, ಗ್ರಾಚ್ಯೂಟಿ, ಓಟಿ, ರಜೆ ಸೌಲಭ್ಯ, ಹೆರಿಗೆ ಮತ್ತಿತರರ ಸೌಲಭ್ಯಗಳನ್ನು ಒದಗಿಸಬೇಕು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಭೀಮರಾಜ್ ಇದ್ದರು,

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

7 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

9 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

13 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

14 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

16 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

16 hours ago