ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.
ಇಟ್ಟಿಗೆ ಬಟ್ಟಿ ಮಾಲೀಕನಿಂದ ರಾಕ್ಷಸ ಕೃತ್ಯ ನಡೆಸಲಾಗಿದೆ. ಕಾರ್ಮಿಕರ ಮೇಲೆ ಪೈಪ್‌ಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ. ವಿಜಯಪುರ ನಗರದ ಗಾಂಧಿ ನಗರದ ಬಳಿಯಿರುವ ಇಟ್ಟಿಗೆ ಬಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ.
ಮೂಲತ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಮೇಲೆ ಹಲ್ಲೆ ಮಾಡಲಾಗಿದೆ. ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರೋದು ವಿಳಂಭವಾದ ಕಾರಣ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಕಾರ್ಮಿಕರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿಡಿಯೋ ವೈರಲ್ ಆಗುತ್ತಿದಂತೆಯೆ ಎಚ್ಚೆತ್ತಿರುವ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಇಟ್ಟಿಗೆ ಬಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್ ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.
ಇತ್ತ ಘಟನೆ ಬಳಿಕ ಖೇಮು ರಾಠೋಡ್ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಭ ಕಾರಣದಿಂದಾಗಿ ಹಲ್ಲೆ ಮಾಡಿದ್ದು, ಉಳಿದ ಕಾರ್ಮಿಕರಿಗೂ ಭಯ ಹುಟ್ಟಿಸಿದೆ. ಹಾಗಾಗಿ ಅವರು ಕೂಡಾ ಕಾರ್ಖಾನೆ ತೊರೆದಿದ್ದಾರೆ.
ವಿಡಿಯೋ ವೈರಲ್ ಬಳಿಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು ಕೂಡಾ ಘಟನೆ ಖಂಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಮಾನವಿಯತೇ ಇಲ್ಲದೆ ವರ್ತನೆ ಮಾಡಿರುವ ವಿಡಿಯೋ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…