ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ‘ಸಂಭ್ರಮ’‌ ಕಾರ್ಯಕ್ರಮ: ಎಲ್ಲರ ಕಣ್ಮನ ಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ಸಂಭ್ರಮ

2019 ರಲ್ಲಿ ಪ್ರಾರಂಭವಾದ ಗುರುಕುಲ ಶಾಲೆ ಆಡಳಿತ ಮಂಡಳಿ ಬದ್ಧತೆ, ಶಿಕ್ಷಕರ ಬೋಧನೆಯಿಂದಾಗಿ ಶಾಲೆಗೆ ಉತ್ತಮ ಹೆಸರು ಬಂದಿರುವುದು ಸಂತಸದ ಸಂಗತಿ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಹೇಳಿದರು.

ನಗರದ ಪ್ರತಿಷ್ಠಿತ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಂಭ್ರಮ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.

ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ‌ ಬೇಕಾದರೂ‌ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಅಭಿಪ್ರಾಯಪಟ್ಟರು.

ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

ಮಕ್ಕಳ‌ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ‌ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.

ಶಾಲೆಯ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಆಡಳಿತ ಮಂಡಳಿ ಮೇಲೆ‌ ಪೋಷಕರು ಇಟ್ಟಿರುವ ನಂಬಿಕೆ‌ಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ. ತಾಲೂಕಿನಲ್ಲೇ ಗುರುಕುಲ ಶಾಲೆಯನ್ನು ನಂ.1 ಶಾಲೆಯನ್ನಾಗಿ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

ಶಾಲೆಯ ಕಾರ್ಯದರ್ಶಿ ಎ.ಎನ್.ಲೋಕೇಶ್ ಕುಮಾರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋವಿಡ್ ಸಂಕಷ್ಟ ಕಾಲದಲ್ಲಿ ಶ್ರೀ ರಾಜಘಟ್ಟ ಆಂಜನೇಯ ಸ್ವಾಮಿ‌ ದೇವಾಲಯದ ಬಳಿ‌ ಸಮಾನ‌ ಮನಸ್ಕರು ಸೇರಿ ಶಾಲೆ ಕಟ್ಟುವ ನಿರ್ಧಾರ‌ ಮಾಡಲಾಯಿತು.

ರಾಜ್ಯವಲ್ಲದೇ ಬೇರೆ ರಾಜ್ಯಗಳ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲ‌ಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ‌ ಸಂಖ್ಯೆ 1000ಕ್ಕೂ ಅಧಿಕವಾಗಿದೆ ಎಂದರು.

ಪ್ರಾಂಶುಪಾಲ ಕೆ.ಎಸ್.ಲೋಕೇಶ್ ವಾರ್ಷಿಕ ವರದಿ ಮಂಡನೆ ಮಾಡಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ‌ ನಿರ್ದೇಶಕರಾದ ಗಂಗಮಾರೇಗೌಡ, ಋತಿಕ್ ನರೇಂದ್ರ, ಕೆ.ಜಿ. ಶ್ರೀನಿವಾಸಮೂರ್ತಿ, ಉಪಪ್ರಾಂಶುಪಾಲ ಶರಣ್ ಬಿ.ವೈ ಇದ್ದರು.

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಕನ್ನಡದ ಜಾನಪದ ಸೊಗಡು, ಕರಾವಳಿ ಭೂತಾರಾಧನೆಯ ಕಂಪು, ಅಮ್ಮನ ಮಹತ್ವ ಸಾರುವ ಹಾಡುಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ವೇದಿಕೆ ಮೇಲೆ ನೃತ್ಯದ ಜೊತೆಗೆ ತಮ್ಮ ಪ್ರತಿಭೆ ಪ್ರದರ್ಶಿಸಿ ಪೋಷಕರ‌ ಮೆಚ್ಚುಗೆಗೆ ಪಾತ್ರರಾದರು.

ಎಸ್ಸೆಸ್ಸೆಲ್ಸಿ ಬಾಲಕ-ಬಾಲಕಿಯರ ಪೈಪೋಟಿಯ ನೃತ್ಯಕ್ಕೆ ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿದರು. ಆ ಬಳಿಕ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕರೊಂದಿಗೆ ಶಾಲೆಯ ನೆನಪು ಸಾರುವ ಚಾಮಯ್ಯ ಮೇಸ್ಟ್ರು ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆಗೂಡಿಸಿ, ಆಡಳಿತ ಮಂಡಳಿಗೆ ಸ್ಮರಣಿಕೆ ನೀಡಿದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

4 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

5 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

7 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

8 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

8 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

9 hours ago