2019 ರಲ್ಲಿ ಪ್ರಾರಂಭವಾದ ಗುರುಕುಲ ಶಾಲೆ ಆಡಳಿತ ಮಂಡಳಿ ಬದ್ಧತೆ, ಶಿಕ್ಷಕರ ಬೋಧನೆಯಿಂದಾಗಿ ಶಾಲೆಗೆ ಉತ್ತಮ ಹೆಸರು ಬಂದಿರುವುದು ಸಂತಸದ ಸಂಗತಿ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಹೇಳಿದರು.
ನಗರದ ಪ್ರತಿಷ್ಠಿತ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಂಭ್ರಮ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.
ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.
ಶಾಲೆಯ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಆಡಳಿತ ಮಂಡಳಿ ಮೇಲೆ ಪೋಷಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ. ತಾಲೂಕಿನಲ್ಲೇ ಗುರುಕುಲ ಶಾಲೆಯನ್ನು ನಂ.1 ಶಾಲೆಯನ್ನಾಗಿ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.
ರಾಜ್ಯವಲ್ಲದೇ ಬೇರೆ ರಾಜ್ಯಗಳ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ ಸಂಖ್ಯೆ 1000ಕ್ಕೂ ಅಧಿಕವಾಗಿದೆ ಎಂದರು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಕನ್ನಡದ ಜಾನಪದ ಸೊಗಡು, ಕರಾವಳಿ ಭೂತಾರಾಧನೆಯ ಕಂಪು, ಅಮ್ಮನ ಮಹತ್ವ ಸಾರುವ ಹಾಡುಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ಎಸ್ಸೆಸ್ಸೆಲ್ಸಿ ಬಾಲಕ-ಬಾಲಕಿಯರ ಪೈಪೋಟಿಯ ನೃತ್ಯಕ್ಕೆ ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿದರು. ಆ ಬಳಿಕ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕರೊಂದಿಗೆ ಶಾಲೆಯ ನೆನಪು ಸಾರುವ ಚಾಮಯ್ಯ ಮೇಸ್ಟ್ರು ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆಗೂಡಿಸಿ, ಆಡಳಿತ ಮಂಡಳಿಗೆ ಸ್ಮರಣಿಕೆ ನೀಡಿದರು.
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…