ಗುರುತ್ವ ಅಕಾಡೆಮಿ: ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದೊಡ್ಡಬಳ್ಳಾಪುರ ನಗರದ ಗಾಂಧಿ‌ ವೃತ್ತದ ಬಳಿ ಇರುವ ಕರ್ನಾಟಕ ಬ್ಯಾಂಕ್ ಸಮೀಪದ ಗುರುತ್ವ ಅಕಾಡೆಮಿಯಲ್ಲಿ ತರಬೇತಿ ಪಡೆದು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಬ್ಬರು ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದರೆ, ಇನ್ನಿಬ್ಬರು ಸೈನಿಕ್ ಶಾಲೆಗೆ ಆಯ್ಕೆಯಾಗಿದ್ದಾರೆ….

ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಅನನ್ಯ ಎಚ್.ಎಸ್

* ಹರ್ಷಿತ್.ವಿ

ಸೈನಿಕ್ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಹರಿಪ್ರಿಯ

* ತೇಜಸ್ ರೆಡ್ಡಿ ಪಿ.ಎನ್

ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶ್ರೀನಿವಾಸ್ ಮಾತನಾಡಿ, ಗುರುತ್ವ ಅಕಾಡೆಮಿ ಪ್ರಾರಂಭವಾಗಿ ಎರಡು ವರ್ಷವಾಗಿದೆ. ಇಲ್ಲಿಯವರೆಗೆ ಸುಮಾರು 150 ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತರಬೇತಿ ಪಡೆದಿದ್ದಾರೆ. ಕಳೆದ ವರ್ಷ ಪ್ರತಿಷ್ಟಿತ ಶಾಲೆಗಳಿಗೆ ಇಬ್ಬರು ಮಕ್ಕಳು ಆಯ್ಕೆಯಾಗಿದ್ದರು. ಈ ವರ್ಷ ನಾಲ್ವರು ವಿದ್ಯಾರ್ಥಿಗಳು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ ಎಂದರು.

ಗುರುತ್ವ ಅಕಾಡೆಮಿಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳಿಗೆ ಅರ್ಥವಾಗುವ ರೀತಿ, ಮಕ್ಕಳ ಬೌದ್ಧಿಕ ಗುಣಮಟ್ಟಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುತ್ತದೆ. ಶಿಕ್ಷಣ ಅನ್ನೋದು ಮಕ್ಕಳಿಗೆ ಹೊರೆ ಆಗಬಾರದು,‌‌ ಮಕ್ಕಳು ಶಿಕ್ಷಣವನ್ನು ಇಷ್ಟಪಟ್ಟು ಪಡೆಯಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸಬೇಕು ಎಂದರು.

ನಂತರ ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ಎಚ್.ಎಸ್ ಅನನ್ಯ ಮಾತನಾಡಿ, ಗುರುತ್ವ ಅಕಾಡೆಮಿಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಉತ್ತಮ ತರಬೇತಿ ನೀಡಲಾಗುತ್ತಿದೆ. ಇಲ್ಲಿ ನಾನು ತರಬೇತಿ ಪಡೆದಿದ್ದರಿಂದ ನವೋದಯ ಶಾಲೆಗೆ ಆಯ್ಕೆಯಾಗಿದ್ದಾನೆ. ಇಂಗ್ಲಿಷ್, ಹಿಂದಿ ಭಾಷೆ ಕಲಿಸಿ ಭಾಷಾ ಜ್ಞಾನ ವೃದ್ಧಿ ಮಾಡುತ್ತಿದ್ದಾರೆ. ಈ ಅಕಾಡೆಮೆಯಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ ಎಂದರು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ, ಪೋಷಕರು, ಗಣ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *