ಗುರುರಾಯರ 430ನೇ ಜನ್ಮದಿನದ ವರ್ಧಂತಿ ಉತ್ಸವ

ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಯ 430ನೇ ಜನ್ಮದಿನವನ್ನು ಬಾಶೆಟ್ಟಿಹಳ್ಳಿಯ ವಿಜಯನಗರದಲ್ಲಿರುವ ಶ್ರೀಗುರು ರಾಘವೇಂದ್ರ ಸ್ವಾಮಿಯ ಸನ್ನಿಧಿಯಲ್ಲಿ ವರ್ಧಂತಿ ಉತ್ಸವವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಈ ವೇಳೆ ಶ್ರೀಗುರು ರಾಘವೇಂದ್ರ ಸ್ವಾಮಿಯ ಆರಾಧಕ, ಅರ್ಚಕ ಗುರುರಾಜಾಚಾರ್ ಮಾತನಾಡಿ, ವರ್ಧಂತಿ ಉತ್ಸವವನ್ನ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾಮಿಯ‌ ಸನ್ನಿಧಿಯಲ್ಲಿ ಗುರುವೈಭವೋತ್ಸವವಾಗಿ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರ ನಡೆಸಲಾಯಿತು. ಸ್ವಾಮಿಯ ದರ್ಶನ ಪಡೆಯಲು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ ಎಂದರು.

ಸ್ವಾಮಿಗೆ ಅಭಿಷೇಕ ನಂತರ ವಿವಿಧ ಹೂ ಗಳಿಂದ ಅಲಂಕಾರ ಮಾಡಲಾಗಿದೆ. ರಾಯರು ಸಂಗೀತ ಪ್ರಿಯರಾಗಿದ್ದರು.. ರಾಯರ ವರ್ಧಂತಿ ಮಹೋತ್ಸವ ಪ್ರಯುಕ್ತ ‌ಪ್ರತಿ ವರ್ಷದಂತೆ ಈ ವರ್ಷವೂ ಸಹ ಯಲಹಂಕದ ಬಿಲ್ವ ವಿನಾಯಕ ಭಜನಾತಂಡದವರು ನಾದಾಹಾರ ಕಾರ್ಯಕ್ರಮ ‌ನಡೆಸಿಕೊಟ್ಟಿದ್ದಾರೆ. ರಾಯರ ಅನುಗ್ರಹ ಎಲ್ಲರ ಮೇಲಿರಲಿ. ಸಕಲ ಜೀವಕೋಟಿರಾಶಿಗಳಿಗೆ ಒಳಿತು ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ದೇವರ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

2 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

2 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

3 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

7 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

8 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

13 hours ago