ಮಂತ್ರಾಲಯದಿಂದ ಬರ್ತಿದ್ದ ಕಾರಿಂದ ಅಪಘಾತ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸರಣಿ ಆಕ್ಸಿಡೆಂಟ್ .. ಬೈಕ್ ಸವಾರನಿಗೆ ಕಾಲು ಕಟ್.! ಸರಣಿ ಡಿಕ್ಕಿ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಗುರು ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಮರಳುತ್ತಿದ್ದ ಪ್ರಯಾಣಿಕರಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರ ಕಾಲು ಕಟ್ ಆಗಿದೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಸ್ಥಳೀಯರು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಬೆಂಗಳೂರಿನತ್ತ ಸಾಗುತ್ತಿದ್ದ ಕಾರು ಮೊದಲಿಗೆ ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ನಂತರ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಯ ಭೀಕರ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆಯನ್ನು ಬಿಂಬಿಸುತ್ತಿವೆ.

ವಿಷಯ ತಿಳಿಯುತ್ತಿದ್ದಂತೆ ವಿಶ್ವನಾಥಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

42 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

13 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

19 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago