ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.
ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.
ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…