ಗೂಡ್ಸ್ ಟೆಂಪೋ ಮತ್ತು ಪ್ಯಾಸೆಂಜರ್ ಆಟೋ ನಡುವೆ ಡಿಕ್ಕಿ ಸಂಭವಿಸಿ, ಒಬ್ಬ ಮಹಿಳೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿನ ಗೊಲ್ಲಹಳ್ಳಿ ತಾಂಡ ಬಳಿ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಹತ್ತು ಮಂದಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮತ್ತೋರ್ವ ಮಹಿಳೆ ಹಾಗೂ ಒಂದು ಹೆಣ್ಣು ಮಗುವಿಗೆ ತೀವ್ರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ.
ಆಟೋದಲ್ಲಿದ್ದ ಪ್ರಯಾಣಿಕರು ನಾಯಕರಂಡಹಳ್ಳಿ ಗ್ರಾಮದವರು ಎನ್ನಲಾಗುತ್ತಿದ್ದು, ಖಚಿತ ಮಾಹಿತಿ ಲಭ್ಯವಾಗಬೇಕಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.