ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಅಪಘಾತವಾಗಿರುವ ಘಟನೆ ಇಂದು ಬೆಳಗ್ಗೆ 11: 15ರ ಸಮಯದಲ್ಲಿ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.
ಅಪಘಾತದಲ್ಲಿ ವಾಹನ ಸವಾರರಿಗೆ ಗಂಭೀರ ಗಾಯಗಳಾಗಿದ್ದು, 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಓರ್ವ ಕಾರಿನ ಪ್ರಯಾಣಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಬೆಂಗಳೂರಿನ ಬಗಲುಗುಂಟೆ ನಿವಾಸಿ ಶಿವಕುಮಾರ್( 32 ) ಸಾವನ್ನಪ್ಪಿರುವ ವ್ಯಕ್ತಿ.
ಅನಂತರಾಮ್ (37) ಗಂಭೀರ ಗಾಯಗೊಂಡಿದ್ದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕಾರು ಹಾಗೂ ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿವೆ.
ಸ್ಥಳಕ್ಕೆ 112 ಪೊಲೀಸ್ ಸಿಬ್ಬಂದಿ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದರು.