ಗೂಳ್ಯ ಗ್ರಾಮಸ್ಥರ ಬಹುದಿನಗಳ ಕನಸು ನನಸು: ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ: ಸಚಿವ ಕೆ.ಎಚ್.ಮುನಿಯಪ್ಪನವರ ಅನುದಾನದಲ್ಲಿ ರಸ್ತೆ ಅಭಿವೃದ್ಧಿ

ದೊಡ್ಡಬಳ್ಳಾಪುರ: ತಾಲೂಕಿನ ಗೂಳ್ಯ ಗ್ರಾಮದ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಗೂಳ್ಯ ಮುಖ್ಯ ರಸ್ತೆಯಿಂದ ಗ್ರಾಮದ ಹನುಮಂತಪ್ಪ ಅವರ ಮನೆಯವರೆಗೆ ಸುಮಾರು ಅರ್ಧ ಕಿಲೋಮೀಟರ್ ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಸುಮಾರು 30 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದ್ದ ಈ ರಸ್ತೆ ನಂದಿಬೆಟ್ಟ ಕ್ರಾಸ್ ಹಾಗೂ ಲಿಂಗನಹಳ್ಳಿ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ.

ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ, ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸೂಚನೆಯಂತೆ ಇಂದು ಗುದ್ದಲಿ ಪೂಜೆ ಮಾಡಲಾಗಿದೆ. ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ರಸ್ತೆ ಹದಗೆಟ್ಟಿರುವುದನ್ನು ಗಮನಿಸಿದ್ದ ಸಚಿವರು ಕೂಡಲೇ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೊಟ್ಟ ಮಾತಿನಂತೆ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ತೂಬಗೆರೆ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೊರತೆಯಿಲ್ಲ. ಸಚಿವ ಕೆ.ಎಚ್.ಮುನಿಯಪ್ಪ ಅವರು ಈ ಭಾಗದ ಶಾಸಕರಾಗಿ ದೊರೆತಿರುವುದು ನಮ್ಮೆಲ್ಲರ ಪುಣ್ಯ. ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜ್ ಮಾತನಾಡಿ, ಸಚಿವರ ಸಹಕಾರದಿಂದ ತೂಬಗೆರೆ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಬಿಜೆಪಿ ಮತ್ತು ಜೆಡಿಎಸ್‌ಗೆ ಅಂತಹ ಇತಿಹಾಸವಿಲ್ಲ. ಮುಂದಿನ ದಿನಗಳಲ್ಲಿ ಸಾಲುಸಾಲು ಚುನಾವಣೆಗಳು ಎದುರಾಗಲಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಎಸ್.ಡಿ.ಮುನಿರಾಜ್ ಮಾತನಾಡಿ, ಗೂಳ್ಯ ಗ್ರಾಮದಲ್ಲಿ ಹಲವು ವರ್ಷಗಳಿಂದ ರಸ್ತೆ ಹದಗೆಟ್ಟಿತ್ತು. ಸಚಿವ ಕೆ.ಎಚ್.ಮುನಿಯಪ್ಪ ಅವರ ಶಾಸಕರ ಅನುದಾನದಲ್ಲಿ ಇದೀಗ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ. ಹಳ್ಳಿಗಳು ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಸಚಿವರು ತೂಬಗೆರೆ ಹೋಬಳಿಯ ಗ್ರಾಮಗಳಿಗೆ ರಸ್ತೆ ದುರಸ್ತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸಚಿವರು ಸೂಚನೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಕಾಂಗ್ರೆಸ್ ಮುಖಂಡ ಅರವಿಂದ್, ಎಸ್‌ಟಿ ಸಮುದಾಯದ ಅಧ್ಯಕ್ಷ ಮುನಿಕೃಷ್ಣಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಶ್ರೀಧರ್, ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ ರಂಗಪ್ಪ, ದೊಡ್ಡಬಳ್ಳಾಪುರ ತಾಲೂಕು ಎಸ್ ಟಿ ಸಮುದಾಯದ ಅಧ್ಯಕ್ಷ ಮುನಿಕೃಷ್ಣಪ್ಪ, ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಮೇಶ್, ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ, ಹನುಮಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮುರುಳಿ ಜಿ, ದೇವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕನಸವಾಡಿ ಶನಿಮಹಾತ್ಮಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಜಿ.ಸತ್ಯನಾರಾಯಣಸ್ವಾಮಿ ನಿಧನ

ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಜಿ. ಸತ್ಯನಾರಾಯಣಸ್ವಾಮಿ (74) ಅವರು ಗುರುವಾರ ರಾತ್ರಿ…

8 hours ago

ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನ ಪುನೀತ್ ಕುಮಾರ್‌ಗೆ ಪ್ರಥಮ ಸ್ಥಾನ; ರಾಜ್ಯಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿ ಪುನೀತ್ ಕುಮಾರ್ ಪ್ರಥಮ…

17 hours ago

ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ:*ಪ್ರಜಾಪ್ರಭುತ್ವದ ಅರಿವು ಮೂಡಿಸಲು ಯುವ ಸಂಸತ್ ಉತ್ತಮ ವೇದಿಕೆ-ಡಿಸಿ

ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳು. ಇಂದಿನ ಮಕ್ಕಳು ನಾಳಿನ ಜವಾಬ್ದಾರಿಯುತ ನಾಗರಿಕರಾಗಬೇಕಾದರೆ ಅವರಿಗೆ ಬಾಲ್ಯದಿಂದಲೇ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು,…

18 hours ago

ಕೆಸ್ತೂರು ಗ್ರಾಮದಲ್ಲಿ ಸ್ಮಶಾನ ಜಾಗಕ್ಕೂ ಕಬಳಿಕೆ ಕಂಟಕ: ಭೂಗಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹ: ದಲಿತ ಕುಟುಂಬಗಳಿಗೆ ಮೀಸಲಿಟ್ಟ ಗೋಮಾಳ ಜಾಗ ರಕ್ಷಣೆಗೆ ಪ್ರಜಾ ವಿಮೋಚನಾ ಚಳವಳಿ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಸುಮಾರು 70ರಿಂದ 80 ದಲಿತ ಕುಟುಂಬಗಳು ವಾಸವಿದ್ದು, ಈ ಕುಟುಂಬಗಳಿಗೆ ಪ್ರತ್ಯೇಕ ಸ್ಮಶಾನ ವ್ಯವಸ್ಥೆ…

20 hours ago

ನನ್ನ ಅವಧಿಯಲ್ಲಿ ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೆ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: 2024ರಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಮತದಾರರನ್ನು ಗುರುತಿಸಿ ಮತ್ತೆ ಪಟ್ಟಿಗೆ ಸೇರ್ಪಡೆಗೊಳಿಸುವ ಉದ್ದೇಶದಿಂದ ಪಕ್ಷದ ವತಿಯಿಂದ 40 ದಿನಗಳ…

22 hours ago

ಸ್ಟೀರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರೀ ಅನಾಹುತ: ರಸ್ತೆ ಗುಂಡಿಗಳೇ ಅವಘಡಕ್ಕೆ ಕಾರಣ ಎಂಬ ಶಂಕೆ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೀರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ…

1 day ago