ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ ದೊರೆಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.
ಜುಲೈ 1 ರಿಂದ ಬಳಸಿದ ವಿದ್ಯುತ್‍ಗೆ ಗೃಹಜ್ಯೋತಿ ಯೋಜನೆಯಡಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಈವರೆಗೂ 1.40 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಜುಲೈ ತಿಂಗಳಿನ ಬಿಲ್‍ನಲ್ಲಿ ಒಂದಿಷ್ಟು ಗೊಂದಲವಿದೆ. ಜೂನ್‍ನಲ್ಲಿ ಬಳಕೆಯಾದ ವಿದ್ಯುತ್‍ಗೆ ಜುಲೈನಲ್ಲಿ ಬಿಲ್ ನೀಡಲಾಗಿದೆ ಎಂದರು.
ಜುಲೈ 1 ರಿಂದ 15 ರವರೆಗೆ ಬಳಸಿದ ವಿದ್ಯುತ್ ಸೇರಿ ಬಿಲ್ ನೀಡಿರುವುದರಿಂದ ಗ್ರಾಹಕರು ಹಣ ಪಾವತಿ ಮಾಡಿದ್ದಾರೆ. ಯೋಜನೆ ಜುಲೈ 1 ರಿಂದ ಜಾರಿಯಾಗಿರುವುದರಿಂದ ಗ್ರಾಹಕರು ಪಾವತಿಸಿದ 15 ದಿನಗಳ ವಿದ್ಯುತ್ ಶುಲ್ಕವನ್ನು ಮರು ಪಾವತಿಸಲಾಗುವುದು ಎಂದು ಗ್ರಾಹಕರ ವಿದ್ಯುತ್ ಬಾಕಿಗೆ ಇದನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಒಂದು ವೇಳೆ ಯಾವುದೇ ಬಾಕಿ ಉಳಿದಿಲ್ಲವಾದರೆ, ಪಾವತಿಸಿದ ಹಣವನ್ನು ಗ್ರಾಹಕರಿಗೆ ಮರು ನಗದೀಕರಿಸುವುದಾಗಿ ಎಂದು ಹೇಳಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…