ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ನೊಂದಿರುವ ನಾಡಿನ ನನ್ನ ತಾಯಂದಿರ, ಅಕ್ಕ ತಂಗಿಯರ ಆರ್ಥಿಕ ಹೊರೆಯನ್ನು ತುಸು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ನಾವು ಘೋಷಣೆ ಮಾಡಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳು ತಪ್ಪದೇ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಪ್ರಜೆಗಳ ಹಿತ ಕಾಯುವುದು ರಾಜಕೀಯ ಧರ್ಮ. ಎಷ್ಟೇ ವಿರೋಧ, ಟೀಕೆಗಳು ಬಂದರೂ ಈ ನಮ್ಮ ನಿಲುವಿನಲ್ಲಿ ಎಳ್ಳಷ್ಟು ಬದಲಾಗದು ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಸುಮಾರು 1. 28 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಮೂಲಕ ಅನುಕೂಲವಾಗಲಿದೆ. ಮುಂದಿನ ತಿಂಗಳಲ್ಲಿ ಮನೆ ಯಜಮಾನಿಗೆ ₹ 2,000/- ಹಣ ಜಮಾ ಆಗಲಿದೆ. ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿದ ದಿನ, ಇಂದೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಪುಣ್ಯ ಎಂದರು.
ಮನೆ ಮನೆಗೂ ಈ ಯೋಜನೆ ತಲುಪಲಿ ಸರ್ಕಾರ ನೀಡುತ್ತಿರುವ ₹ 2000/- ರೂ,ಗಳು ಪ್ರತಿ ಬಡ ಕುಟುಂಬದ ಹಸಿವನ್ನ ನೀಗಿಸಲು ಸಹಕಾರಿಯಾಗಲಿದೆ. ನಾನೊಬ್ಬ ರೈತನ ಮಗಳು ಕಷ್ಟವನ್ನು ಹತ್ತಿರದಿಂದ ನೋಡಿದ್ದೇನೆ. ಹಳ್ಳಿಯ ಜೀವನ ಅನುಭವಿಸಿದ್ದೇನೆ ಎಂದು ಹೇಳಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಶಾಸಕರಾದ ಶ್ರೀನಿವಾಸ ಮಾನೆ, ಆಸಿಫ್ ಸೇಠ್, ಬಾಬಾಸಾಹೇಬ ಪಾಟೀಲ, ಎ.ಆರ್.ಕೃಷ್ಣಮೂರ್ತಿ, ಎನ್.ಎಚ್.ಕೋನರಡ್ಡಿ, ವಿಧಾನಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಸಲೀಂ ಅಹಮದ್, ಚನ್ನರಾಜ ಹಟ್ಟಿಹೊಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ ಉಪಸ್ಥಿತರಿದ್ದರು. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…