ಗೃಹಲಕ್ಷ್ಮಿ ಯೋಜನೆಯ ನೋಂದಣಿ ಉಚಿತ- ಹಣ ಪಡೆದರೆ ದೂರು ನೀಡಿ- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಕುಟುಂಬದ ಯಜಮಾನಿಗೆ ರೂ.2000/- ನೀಡುವ “ಗೃಹಲಕ್ಷ್ಮಿ” ಯೋಜನೆಯು ಜುಲೈ 19ರಂದು ಅನುಷ್ಠಾನಗೊಂಡಿರುತ್ತದೆ. ಜುಲೈ 20 ರಿಂದ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಫಲಾನುಭವಿಗಳು ಜಿಲ್ಲೆಯಲ್ಲಿರುವ 101 ಬಾಪೂಜಿ ಸೇವಾಕೇಂದ್ರಗಳು ಮತ್ತು 103 ಗ್ರಾಮ ಒನ್ ಕೇಂದ್ರಗಳಲ್ಲಿ ಹಾಗೂ ನಗರ ಪ್ರದೇಶದ ಫಲಾನಭವಿಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾಪಿಸಲಾಗಿರುವ 23 ಕೇಂದ್ರಗಳಲ್ಲಿ ಕರ್ನಾಟಕ ಒನ್ 8 ಕೇಂದ್ರಗಳಲ್ಲಿ ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಹತ್ತಿರದ ಕೇಂದ್ರಗಳಲ್ಲಿ ಫಲಾನುಭವಿಗಳು ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಹಣವನ್ನು ಬೇಡಿದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಸಾರ್ವಜನಿಕರು ದೂರನ್ನು ನೀಡಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *