ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್

ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 27ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತಾಗಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ನೇರ ನಗದು ಸೌಲಭ್ಯವನ್ನು ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಆಗಸ್ಟ್ 27 ರಂದು ಏಕಕಾಲದಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಲು ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ, ಛತ್ರಗಳಲ್ಲಿ ಏರ್ಪಡಿಸಬಹುದಾಗಿದೆ, ರಾಜ್ಯಮಟ್ಟದ ಕಾರ್ಯಕ್ರಮವು ಬೆಳಗಾವಿಯಲ್ಲಿ ನಡೆಯುವುದರಿಂದ, ಪ್ರತಿ ಕಾರ್ಯಕ್ರಮದಲ್ಲಿ ಒಂದು ಟಿವಿ ಹಾಗೂ 10X10 ಅಳತೆಯ ಎಲ್ಇಡಿ ಪರದೆಯನ್ನು ಇಟ್ಟು ಟಿವಿ ಮೂಲಕ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರವನ್ನು ಪ್ರದರ್ಶಿಸಲು ಹಾಗೂ ಎಲ್ಇಡಿ ಪರದೆಯಲ್ಲಿ ಬೆಳಗಾವಿ ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳದೊಂದಿಗೆ ಪರಸ್ಪರ ಸಂವಾದ ನಡೆಸುವುದು. ಹೀಗಾಗಿ ಅಗತ್ಯ ಟಿ.ವಿ ಹಾಗೂ ಎಲ್.ಇ.ಡಿ ಪರದೆಯನ್ನು ಮುಂಗಡ ಕಾಯ್ದಿರಿಸಲು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆ ಕುರಿತ ಕರಪತ್ರಗಳನ್ನು ಮನೆ ಮನೆಗೆ ವಿತರಿಸಿ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು. ಕಾರ್ಯಕ್ರಮದಲ್ಲಿ ಕುಡಿಯುವ ನೀರು ಮತ್ತು ಲಘುಪಹಾರ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಎಂದರು.

ನಗರ ವ್ಯಾಪ್ತಿಯ ಸ್ಥಳೀಯ ಮಟ್ಟದ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು, ಸದಸ್ಯರನ್ನು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಉಪ ಕಾರ್ಯದರ್ಶಿ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್ ಸೇರಿದಂತೆ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

5 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

5 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

9 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

11 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

14 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

18 hours ago