ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆದರೆ ಲಾಗಿನ್ ಐಡಿ ರದ್ದು- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಡಕ್ ವಾರ್ನಿಂಗ್

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ಖಡಕ್ ವಾರ್ನಿಂಗ್ ಮಾಡಿದ್ದಾರೆ.

Leave a Reply

Your email address will not be published. Required fields are marked *