ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು 2022ರ ನವೆಂಬರ್ 23 ರೊಳಗೆ ತರಬೇತಿಗೆ ನೇರವಾಗಿ ಹಾಜರಾಗಬಹುದು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…