ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಹೇಳಿದರು.
ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಗ್ಯಾಸ್ ಏಜೆನ್ಸಿ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಕಾಯ್ದೆಯಡಿ ನಿಗದಿತ ಬೆಲೆಗೆ ಮಾರಾಟ ಮಾಡಬೇಕು, ಸಿಲಿಂಡರ್ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಏಜೆನ್ಸಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಐ.ಓ.ಸಿ.ಎಲ್, ಎಚ್.ಪಿ.ಸಿ.ಎಲ್ ಮತ್ತು ಬಿಪಿಸಿಎಲ್ ಕಂಪನಿಗಳ ಅಡಿಯಲ್ಲಿ 24 ಗ್ಯಾಸ್ ಏಜೆನ್ಸಿ ಕಾರ್ಯ ನಿರ್ವಹಿಸುತ್ತಿದೆ. ಗೃಹ ಉಪಯೋಗಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಗೃಹ ಉಪಯೋಗಿ ಅನಿಲ ಸಿಲಿಂಡರ್ ಬುಕ್ ಮಾಡಲು 25 ದಿನ ಆಗಿರಬೇಕು. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.
ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಅಡುಗೆ ಅನಿಲದ ಕೊರತೆಯಾಗದಂತೆ ವಿತರಕರು ಸರಬರಾಜು ಮಾಡಲು ಕ್ರಮ ವಹಿಸಿ.
ಪ್ರಸ್ತುತ ಪದವಿ ಪೂರ್ವ ಪರೀಕ್ಷೆಗಳು ನಡೆಯುತ್ತಿದ್ದು, ನಂತರ ಎಸ್.ಎಸ್.ಎಲ್.ಸಿ ಮತ್ತು ಪದವಿ ಪರೀಕ್ಷೆಗಳು ನಡೆಯುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದಲ್ಲಿ ತೊಂದರೆಯಾಗದಂತೆ ನಿರಂತರ ಅನಿಲ ಪೂರೈಕೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
*ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ಆಸ್ಪದ ಬೇಡ*
ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಯ ಗ್ರಾಮಗಳು ಹಾಗೂ ನಗರಗಳಲ್ಲಿ ಯಾವುದೇ ಕುಡಿಯುವ ನೀರಿನ ಅಭಾವ ಎದುರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು.
ನೀರಿನ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಬತ್ತಿದ ಬೋರ್ವೆಲ್ ಗಳ ಮರು ಭರ್ತಿ ಮಾಡಿ ಹಾಗೂ ಅಗತ್ಯವಿದ್ದಲ್ಲಿ ಹೊಸ ಬೋರ್ವೆಲ್ ಕೊರೆಯಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಉಪವಿಭಾಗಾಧಿಕಾರಿ ದುರ್ಗಾ ಶ್ರೀ, ಜಿ.ಪಂ ಯೋಜನಾಧಿಕಾರಿ ರಾಮಕೃಷ್ಣ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…