ಬೇಸಿಗೆ ರಜೆ ಮತ್ತು ವಾರಾಂತ್ಯದ ಕಾರಣ ಸುಮಾರು 300 ಜನಸಂದಣಿಯಿಂದ ತುಂಬಿದ್ದ ಎರಡು ಅಂತಸ್ತಿನ ಮನರಂಜನಾ ತಾಣವಾದ ಗುಜರಾತ್ – ರಾಜ್ ಕೋಟ್ ನ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಹಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹವಾನಿಯಂತ್ರಣ ಘಟಕದಲ್ಲಿ ಭಾರೀ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿಯು ತ್ವರಿತವಾಗಿ ತೀವ್ರಗೊಳ್ಳುತ್ತಿದ್ದಂತೆ ಸ್ಫೋಟವು ಗೇಮಿಂಗ್ ವಲಯವನ್ನು ದಟ್ಟವಾದ ಹೊಗೆಯಲ್ಲಿ ಆವರಿಸಿದೆ. ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ನಂತರ ಬೆಂಕಿ ವೇಗವಾಗಿ ಹೆಚ್ಚಾಗಿದೆ. ಬೆಂಕಿ ಮತ್ತು ಹೊಗೆಯಿಂದ ಓಡಿಹೋಗಲು ಜನರು ಮುಂದಾಗಿದ್ದಾರೆ.
ಸುಮಾರು ಎರಡು ಗಂಟೆಗಳ ಕಾಲ ಬೆಂಕಿನಂದಿಸುವ ನಿರಂತರ ಕಾರ್ಯಾಚರಣೆಯೊಂದಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…
ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…
ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…
ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…
ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…