“ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ, ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮುಂದೆ ಸಾಗುವುದರಿಂದ ಸಮಾಜದಲ್ಲಿ ಮನ್ನಣೆ ಮತ್ತು ಪುರಸ್ಕಾರಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ಬೋಯಿಂಗ್ ಸಂಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (AI) ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮತ್ತು ಹಿರಿಯ ತಂತ್ರಜ್ಞೆ ಡಾ. ಸೀಮಾ ಚೋಪ್ರಾ ತಿಳಿಸಿದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಗೀತಮ್ ವಿಶ್ವವಿದ್ಯಾಲಯದಲ್ಲಿಂದು (ಡೀಮ್ಡ್ ಯೂನಿವರ್ಸಿಟಿ) ಪದವಿಪೂರ್ವ, ಸ್ನಾತಕೋತ್ತರ, ಪಿಎಚ್ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿಜೀವನದಲ್ಲಿ ನಿರಂತರ ಕಲಿಕೆ, ಸ್ಪಷ್ಟ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿ ಅವಶ್ಯಕ. ಜೊತೆಗೆ ನಿಮ್ಮ ಸ್ನೇಹಿತರು ಮತ್ತು ಸಹಪಾಠಿಗಳಿಗೆ ಪ್ರಮುಖ್ಯತೆ ನೀಡಿ ಹಾಗೂ ಮುಂದೆ ಕೆಲಸದ ಒತ್ತಡ ಎಷ್ಟೇ ಇದ್ದರು ಸದಾ ಕುಟುಂಬಕ್ಕೆ ಆದ್ಯತೆ ನೀಡುವುದು ಅಗತ್ಯ ಎಂದು ಹೇಳಿದರು.
ಬೆಂಗಳೂರಿನ ಗೀತಮ್ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಕೆಎನ್‌ಎಸ್ ಆಚಾರ್ಯ ಮಾತನಾಡಿ, ‘ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ಶಿಕ್ಷಣವನ್ನು ಸಾಮಾಜಿಕ, ವಾಸ್ತವಿಕತೆ ಜೊತೆಗೆ ಸಂಯೋಜಿತಗೊಳಿಸಿ ಶಿಕ್ಷಣ ವ್ಯವಸ್ಥೆಯನ್ನು ಮರುರೂಪಿಸುವ ದಿಕ್ಕಿನೆಡೆಗೆ ಸಾಗುತ್ತಿದ್ದೇವೆ. ಗೀತಮ್ ವಿಶ್ವವಿದ್ಯಾನಿಲಯದ ಕೋರ್ಸ್ ಗಳನ್ನು ಉದ್ಯಮದ ಸಹಯೋಗದೊಂದಿಗೆ ವಿನ್ಯಾಸಗೊಳಸಲಾಗಿದ್ದು, ವಾಸ್ತವ ಪ್ರಪಂಚದ ಸಮಸ್ಯೆಗಳಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಮ್ಮ ಸಂಶೋಧನೆಗಳು ನಡೆಯುತ್ತವೆ ಎಂದರು.
ನಮ್ಮ ವಿದ್ಯಾರ್ಥಿಗಳನ್ನು ನಿರ್ದಿಷ್ಟ ಉದ್ದೇಶದ ಹಿನ್ನೆಲೆಯಲ್ಲಿ ಯೋಚಿಸಲು, ಅದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲಾಗುತ್ತದೆ. ಈ ಸಮಾರಂಭವು ಕೇವಲ ಕೋರ್ಸ್ ನ ಅಂತ್ಯ ಮಾತ್ರವೇ ಅಲ್ಲ ಹೊಸ ಜವಾಬ್ದಾರಿಯ ಆರಂಭವಾಗಿದೆ. ಜ್ಞಾನವನ್ನು ಸಮಗ್ರತೆಯೊಂದಿಗೆ ಅನ್ವಯಿಸುವ, ಸದಾ ಕುತೂಹಲದಿಂದಿರುವ ಮತ್ತು ಪ್ರಪಂಚದಲ್ಲಿ ಅರ್ಥಪೂರ್ಣ ವ್ಯತ್ಯಾಸವನ್ನು ತರುವ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳು ಹೊರಟಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹೇಳಿದರು.
1,310 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಪದವಿ ಪ್ರದಾನ ಸಮಾರಂಭದಲ್ಲಿ ಒಟ್ಟು 1,310 ಮಂದಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು. ಇದರಲ್ಲಿ 1,239 ಮಂದಿ ಪದವಿ, 54 ಮಂದಿ ಸ್ನಾತಕೋತ್ತರ ಪದವಿ ಮತ್ತು 17 ಮಂದಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ತಮ್ಮ ಕೋರ್ಸ್ ಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಗಳಿಸಿದ 18 ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಗೀತಮ್ ಸ್ಕೂಲ್ ಆಫ್ ಬಿಸಿನೆಸ್ ನ ಅಸೋಸಿಯೇಟ್ ಪ್ರೊಫೆಸರ್ ಡಾ. ಜಿ. ಪಿ. ಸೆಂಥಿಲ್ ಕುಮಾರ್ ಅವರಿಗೆ ಅಕೌಂಟಿಂಗ್, ಫೈನಾನ್ಸ್ ಮತ್ತು ಅಪ್ಲೆಡ್ ಬಿಸಿನೆಸ್ ವಿಭಾಗದಲ್ಲಿ ನಡೆಸಿದ ಅದ್ಭುತ ಸಂಶೋಧನ ಕಾರ್ಯಕ್ಕಾಗಿ ಶ್ರೇಷ್ಠ ಸಂಶೋಧಕ ಪ್ರಶಸ್ತಿಯನ್ನು ನೀಡಲಾಯಿತು.
ಕೋರ್ಸ್ ಮುಗಿಸಿ ಪದವಿ ಪಡೆದ ವಿದ್ಯಾರ್ಥಿಗಳು ಮಾತನಾಡಿ, ಬೆಂಗಳೂರು ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ವ್ಯಾಸಂಗ ಮಾಡಿ ಪದವಿ ಪಡೆದಿದ್ದೇವೆ ಎಂಬುದರ ಬಗ್ಗೆ ನಮಗೆ ಹೆಮ್ಮೆ ಇದೆ. ಉತ್ತಮ ವಾತಾವರಣದಲ್ಲಿ ನಮ್ಮ ಕೋರ್ಸ್ ಮುಗಿಸಿದ್ದೇವೆ. ನಮ್ಮ ಸಂಸ್ಥೆಯ ಮೇಲೆ ನಮಗೆ ಅಪಾರವಾದ ಗೌರವವಿದೆ. ನಮ್ಮ ಕಲಿಕೆ ಅತ್ಯುತ್ತಮವಾಗಲು ನಮ್ಮ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ನೀಡಿರುವ ಸಹಕಾರ ಮರೆಯಲು ಅಸಾಧ್ಯ, ನಮಗೆ ಶುಭ ಕೋರಿ ಪದವಿ ಪ್ರದಾನ ಮಾಡಲು ಹಲವು ಗಣ್ಯರು ಆಗಮಿಸಿರುವುದು ಸಂತಸ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರೊ. ಎರೋಲ್ ಡಿ’ಸೋಜಾ, ಮುಖ್ಯ ಅತಿಥಿ ಡಾ. ಸೀಮಾ ಚೋಪ್ರಾ, ಗೀತಂನ ಅಧ್ಯಕ್ಷ ಎಂ. ಭರತ್, ಉಪಾಧ್ಯಕ್ಷ ಪ್ರೊ. ಎಂ.ಗಂಗಾಧರ ರಾವ್, ಆಡಳಿತ ಮಂಡಳಿಯ ಸದಸ್ಯರು ಮತ್ತು ಕಾರ್ಯಕಾರಿ ಮಂಡಳಿಯ ಸದಸ್ಯರು, ಅಸೋಸಿಯೇಟ್ ಡೀನ್‌ಗಳು, ಸಂಸ್ಥೆಗಳ ಮುಖ್ಯಸ್ಥರು, ರಿಜಿಸ್ಟ್ರಾರ್, ಕ್ರಿಯಾತ್ಮಕ ನಿರ್ದೇಶಕರು, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…