Categories: ಮೈಸೂರು

ಗೋಡಾ ಹೈ – ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ- ಸಿಎಂ‌ ಸಿದ್ದರಾಮಯ್ಯ

ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದು ತಿಳಿಸಿದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನವು ಜಾತ್ಯತೀತ ಮತ್ತು ಧರ್ಮಾತೀತವಾದುದ್ದು. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.
ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು ಎಂದರು.

ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬರಬೇಕು, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.

ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ಜನರ ತಲಾದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಎಸ್‌ಡಿಪಿ ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಹೇಳಿದರು.

Ramesh Babu

Journalist

Recent Posts

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

37 minutes ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

10 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

11 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

13 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

15 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

17 hours ago